ಎಸ್ಸೆಸ್ಸೆಲ್ಸಿ ಫಲಿತಾಂಶ | ಕೆಂಭಾವಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಸನ್ಮಾನ

Date:

ವಿದ್ಯಾಲಕ್ಷ್ಮಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಬದಿಹಾ ಆಫಾಫ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 606 ಅಂಕಗಳನ್ನು ಪಡೆದು ಶಾಲೆಗೆ ಹಾಗೂ ಕೆಂಭಾವಿ ಪಟ್ಟಣಕ್ಕೆ ಕೀರ್ತಿ ತಂದ ಹಿನ್ನೆಲೆ, ನಮ್ಮ ಕರ್ನಾಟಕ ಸೇನೆ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

- Advertisement -

ವಿಶೇಷವಾಗಿ ಕನ್ನಡ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಹಿನ್ನೆಲೆ, ವಿದ್ಯಾರ್ಥಿನಿಯನ್ನು ನಮ್ಮ ಕರ್ನಾಟಕ ಸೇನೆಯ ಕೆಂಭಾವಿ ಹೋಬಳಿ ಕಾರ್ಮಿಕ ಘಟಕದ ಅಧ್ಯಕ್ಷ ಗುರುರಾಜ ಎಸ್. ಅಂಗಡಿ, ಮಲ್ಲು ಹಂಗರಿಗಿ ಹಾಗೂ ಪತ್ರಕರ್ತ ವೀರೇಶ ಟಕ್ಕಳಕಿ ಅವರು ಸನ್ಮಾನಿಸಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ವೇಳೆ ಗುರುರಾಜ ಎಸ್ ಅಂಗಡಿ ಅವರು ಮಾತನಾಡಿ, “ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿದ್ಯಾರ್ಥಿನಿ ಕನ್ನಡಾಭಿಮಾನ ಮೆರೆದಿರುವುದು ಹೆಮ್ಮೆಯ ಸಂಗತಿ” ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬದಿಹಾ ಆಫಾಫ್, ತನ್ನ ಸಾಧನೆಗೆ ಶಿಕ್ಷಕರು ಹಾಗೂ ಪೋಷಕರ ಪ್ರೋತ್ಸಾಹವೇ ಕಾರಣ ಎಂದು ತಿಳಿಸಿ, “ಪ್ರಯತ್ನ ಪಟ್ಟರೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಎಂದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಸಂದೇಶ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು: ಅನಿಲ್ ತೇಜಪ್ಪ ಬಲ್ಲೂರ್ಕರ್

ಮಗಳ ಸಾಧನೆಯಿಂದ ಸಂತಸಗೊಂಡ ಪೋಷಕರು ಸಿಹಿ ಹಂಚಿ ಸಂಭ್ರಮಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...