ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

Date:

Advertisements

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 25) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್‌ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

Advertisements

2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್‌ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೇ ಈ ಬಾರಿ ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ದರು. ಆದರೆ, ಹೈಕಮಾಂಡ್ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ಉಗ್ರಾಣ ನಿಗಮ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅದರಂತೆ ಮೊನ್ನೇ ಅಷ್ಟೇ ಅವರು ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

Download Eedina App Android / iOS

X