ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

Date:

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್ ರಸ್ತೆಯ ರೈಲ್ವೆ ಮೇಲ್ಸೇತುವೆ ಹಾಗೂ ಭೀಮಾ ನದಿ ಬ್ರಿಡ್ಜ್ ಮೇಲಿನ ರಸ್ತೆ ಸಂಪೂರ್ಣ ಹದಗೆಟ್ಟಿರುವುದನ್ನು ಖಂಡಿಸಿ ರಸ್ತೆ ಗುಂಡಿಗಳನ್ನು ಕೂಡಲೇ ದುರಸ್ತಿಪಡಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರು ಮಾತನಾಡಿ, “ಸೇತುವೆಗಳ ಮೇಲಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಮಳೆಯ ಸಂದರ್ಭದಲ್ಲಿ ಅವುಗಳಲ್ಲಿ ನೀರು‌ ಸಂಗ್ರಹವಾಗಿ ಗುಂಡಿಗಳು ಕಾಣದಂತಾಗಿ ಕೆರೆಯಂತಾಗುತ್ತದೆ. ಇದರಿಂದ ವಾಹನ ಸವಾರರು ಜೀವಭಯದಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ರಸ್ತೆ ನಿರ್ಮಾಣದ ವೇಳೆ ಬಳಸಿರುವ ಕಬ್ಬಿಣದ ಸರಳುಗಳು ಹೊರಬಂದಿದ್ದು, ಅಪಘಾತದ ಅಪಾಯ ಮತ್ತಷ್ಟು ಹೆಚ್ಚಾಗಿದೆ. ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಈ ಪ್ರಮುಖ ರಸ್ತೆಯ ದುಃಸ್ಥಿತಿಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೂಡಲೇ ರಸ್ತೆ ದುರಸ್ತಿ ಕಾಮಗಾರಿಯನ್ನು ಆರಂಭಿಸಬೇಕು” ಎಂದು ಉಮೇಶ ಕೆ. ಮುದ್ನಾಳ ಒತ್ತಾಯಿಸಿದರು.

ಇದನ್ನೂ ಓದಿದ್ದೀರಾ? ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

“ನಿರ್ಲಕ್ಷ್ಯ ಮುಂದುವರಿದರೆ ಮುಂದಿನ ದಿನಗಳಲ್ಲಿ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ರಸ್ತೆಯಲ್ಲಿ ಯಾವುದೇ ಅಪಘಾತ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಪವನ್, ಮಲ್ಲೇಶ, ಭೀಮಶಂಕರ, ರಾಜು, ವೆಂಕಟೇಶ, ಸಾಬಣ್ಣ, ಮಲ್ಲಪ್ಪ ಅಳ್ಳೆಪ್ಪ ಮುದ್ನಾಳ್, ಗಣೇಶ್ ಯಾದಗಿರಿ, ಅಯ್ಯಣ್ಣ ನಾಯ್ಕಲ್, ನರಸಿಂಹ ಯಾದಗಿರಿ, ಕೃಷ್ಣ ಕಾನಾಪುರ, ಸಲೀಂ ಯಾದಗಿರಿ, ಶರಣು ನಾರಣಪೇಟ್, ಶರಣಪ್ಪ ಗೋಡ್ಯಾಳ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...