ಯಾದಗಿರಿ | ಬುದ್ಧ, ಬಸವ, ಅಂಬೇಡ್ಕರ್ ತತ್ವ ಚಿಂತನೆಗಳು ಅವಶ್ಯಕ : ಮುರುಘರಾಜೇಂದ್ರ ಶ್ರೀ

Date:

ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ–ಸಿದ್ಧಾಂತಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಅಂಬೇಡ್ಕರ್ ರಚಿಸಿದ ಸಂವಿಧಾನವೇ ಮಾನವೀಯ ಮತ್ತು ಸಮಾನತೆಯ ಬದುಕಿಗೆ ದಾರಿ ತೋರಿಸುವ ಮಹಾನ್ ಗ್ರಂಥವಾಗಿದೆ ಎಂದು ಗುರುಮಠಕಲ್ ಖಾಸಮಠದ ಶ್ರೀ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

- Advertisement -

ಯಾದಗಿರಿ ನಗರದಲ್ಲಿ ಶನಿವಾರ ದಿ. ವಿಶ್ವನಾಥರೆಡ್ಡಿ ಗೌಡ ಮುದ್ನಾಳ ಸಭಾಂಗಣದಲ್ಲಿ ಭೀಮ ಜ್ಯೋತಿ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ ನಾಟಕ ಪ್ರದರ್ಶನ ಹಾಗೂ ಅಂಬೇಡ್ಕರ್ ಸೇವರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1033131

‘ಸಮಾಜದಲ್ಲಿ ಉತ್ತಮ ನಡತೆ, ಪರಸ್ಪರ ಸಮನ್ವಯ ಹಾಗೂ ಬಾಧ್ಯತೆಯ ಅರಿವಿನಿಂದ ನಡೆದುಕೊಳ್ಳುವ ಮೂಲಕ ರಾಷ್ಟ್ರೀಯ ಏಕತೆಯನ್ನು ಬಲಪಡಿಸಬೇಕಿದೆ. ಸಂವಿಧಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭೀಮ ಜ್ಯೋತಿ ಸಂಸ್ಥೆ ನಡೆಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ನಾಟಕಗಳ ಮೂಲಕ ಮಹಾನ್ ನಾಯಕರ ಜೀವನ ಚರಿತ್ರೆಯನ್ನು ಜನಮನದಲ್ಲಿ ಬಿತ್ತುವ ಮಹತ್ವದ ಕೆಲಸ ಸಂಸ್ಥೆ ಮಾಡುತ್ತಿದೆ’ ಎಂದು ಪ್ರಶಂಸಿಸಿದರು.

ಕಾರ್ಯಕ್ರಮವನ್ನು ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚನ್ನಬಸಪ್ಪ ಮುಧೋಳ್ ಉದ್ಘಾಟಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಚನ್ನಬಸಪ್ಪ, ಉದ್ಯಮಿ ಹಾಗೂ ಶಶಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಶಿರಗೋಳ, ಜಿಲ್ಲಾ ಪಿ/ಪಂ ದೌರ್ಜನ್ಯ ತಡೆ ಸಮಿತಿ ಸದಸ್ಯ ಮರೆಪ್ಪ ಚಟ್ಟರ್ಕರ್, ಸಂಸ್ಥೆಯ ಅಧ್ಯಕ್ಷ ಭೀಮಶಂಕರ್ ಎಂ. ಯರಗೋಳ, ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಷಚಂದ್ರ ಕೌಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

1033132

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು. ಭವಾನಿ ಅಂಬೇಡ್ಕರ್ ಗೀತೆಗೆ ಭರತನಾಟ್ಯ ಪ್ರದರ್ಶಿಸಿದರು. ಅಂಬಿಕಾ ಹಾಗೂ ತಂಡ ಅಂಬೇಡ್ಕರ್ ಹಾಡಿಗೆ ನೃತ್ಯ ಮಾಡಿದರು. ಸೀತಮ್ಮ ಹಾಗೂ ತಂಡ ಅಂಬೇಡ್ಕರ್ ಗೀತೆ ಹಾಡಿದರು. ವಿಜಯನಗರ ಜಿಲ್ಲೆಯ ತುಂಗಭದ್ರ ಕಲಾತಂಡದಿಂದ ‘ನಮ್ಮ ಸಂವಿಧಾನ’ ಎಂಬ ನಾಟಕವನ್ನು ಪ್ರದರ್ಶಿಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಬಳ್ಳಾರಿ ಗುಂಪು ಘರ್ಷಣೆ ಪ್ರಕರಣ: ಎಸ್.ಪಿ. ಪವನ್ ನೆಜ್ಜೂರ್ ಅಮಾನತು ಖಂಡಿಸಿ ದಸಂಸ ಮನವಿ

ಕಾರ್ಯಕ್ರಮವನ್ನು ರೇಣುಕಾ ಕುಂಬಾರಹಳ್ಳಿ ನಿರೂಪಿಸಿದರು. ಮಾಲಾಶ್ರೀ ಬಿ. ಪ್ರಾರ್ಥಿಸಿದರು. ದೇವೇಂದ್ರ ಧೋತ್ರೆ ಸ್ವಾಗತಿಸಿ ವಂದಿಸಿದರು.

1033130

ಇದೆ ವೇಳೆ ಕಾರ್ಯಕ್ರಮದಲ್ಲಿ ಧಾರ್ಮಿಕ ಕ್ಷೇತ್ರದಿಂದ ಶ್ರೀ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿ, ನ್ಯಾಯಾಂಗ ಕ್ಷೇತ್ರದಿಂದ ನ್ಯಾಯಾಧೀಶ ಮರಿಯಪ್ಪ, ಸಾಮಾಜಿಕ ಕ್ಷೇತ್ರದಿಂದ ಎಸ್ ಎಸ್ ಚನ್ನಬಸಪ್ಪ, ವೈದ್ಯಕೀಯ ಕ್ಷೇತ್ರದಿಂದ ಡಾ. ಮಹೇಶ್ ಬಿರಾದಾರ, ಸಾಮಾಜಿಕ ಹೋರಾಟಗಾರೆಂದು ಮರೆಪ್ಪ ಚಟ್ಟರ್ಕರ್, ಶಿಕ್ಷಣ ಕ್ಷೇತ್ರದಿಂದ ಬಾಬು ಗಂಗು ಚೌವ್ಹಾಣ ರವರಿಗೆ ಡಾ. ಬಿ ಆರ್ ಅಂಬೇಡ್ಕರ್ ಸೇವರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...