ಯಾದಗಿರಿ | ‘ಬುದ್ಧ ಮಲಗಿದ ಬೆಟ್ಟ’ ಯೋಜನೆ ತ್ವರಿತ ಅನುಷ್ಠಾನಕ್ಕೆ ಆಗ್ರಹ

Date:

ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ವಿಶ್ವ ಪ್ರಸಿದ್ಧ ಪ್ರವಾಸೋದ್ಯಮ ತಾಣವಾದ ‘ಬುದ್ಧ ಮಲಗಿದ ಬೆಟ್ಟ’ದ ಯೋಜನೆಯನ್ನು ಜನೋಪಯೋಗಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಾಹಾಸಭಾದ ಮುಖಂಡರು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

- Advertisement -

“ಬುದ್ಧ ಮಲಗಿದ ಬೆಟ್ಟವು ಕರ್ನಾಟಕ ರಾಜ್ಯಕ್ಕೆ ವಿಶ್ವಮಟ್ಟದ ಖ್ಯಾತಿ ತಂದುಕೊಟ್ಟ ನಿಸರ್ಗದ ಅದ್ಭುತ ಪ್ರವಾಸಿತಾಣವಾಗಿದೆ. ಸಗರಾದ್ರಿ ಬೆಟ್ಟದಲ್ಲಿರುವ ಪ್ರಾಚೀನ, ಐತಿಹಾಸಿಕ, ಸಾಂಸ್ಕೃತಿಕ ನೆಲೆಗಳು, ಬೌದ್ಧ, ಶೈವ, ವೈಷ್ಣವ, ಸೂಫಿ ಶರಣ ಪರಂಪರೆಯ ಕುರುಹುಗಳ ತಾಣವಾಗಿದೆ. ಇಲ್ಲಿನ ಪರಿಸರ ಖನಿಜ, ಸಸ್ವರಾಶಿ, ಜೀವಸಂಪತ್ತು ಸಹ ವೈಶಿಷ್ಟಪೂರ್ಣವಾಗಿದೆ” ಎಂದು ಮಹಾಸಭಾ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸರ್ಕಾರವು ಬುದ್ಧ ಮಲಗಿದ ಬೆಟ್ಟವನ್ನು ಪ್ರವಾಸಿತಾಣವೆಂದು ಘೋಷಿಸಿ ಕೋಟ್ಯಾಂತರ ರೂಪಾಯಿ ಅನುದಾನ ಖರ್ಚುಮಾಡುತ್ತಾ ಬಂದಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷತನದಿಂದ ಈ ತಾಣದ ಅಭಿವೃದ್ಧಿ ಯೋಜನೆ ದಶಕಗಳಿಂದ ತೆವಳುತ್ತಿದೆ. ಅಲ್ಲದೆ, ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಕಳಪೆ ಕಾಮಗಾರಿಗಳು ಸಾಕ್ಷಿಯಾಗಿವೆ. ಇಲ್ಲಿನ ಅವ್ಯವಸ್ಥೆ ಮತ್ತು ಕಾನೂನು ಬಾಹಿರ ಜನವಿರೋಧಿ ಚಟುವಟಿಕೆಗಳ ಬಗ್ಗೆ ಹಲವಾರು ಸಂಘ ಸಂಸ್ಥೆಗಳು ಹಲವು ಭಾರಿ ಮನವಿ ಸಲ್ಲಿಸಿದರು. ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ” ಎಂದು ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನವಿ ಸಲ್ಲಿಸುವ ವೇಳೆ ಸುರೇಶ ಎಸ್, ವೆಂಕಟೇಶ್‌ ಹೊಸಮನಿ, ರಣವೀರ ಹೊಸಮನಿ, ಬುದ್ಧಘೋಷ ದೇವಿಂದ್ರ ಹೆಗಡೆ, ಬಾಬುರಾವ್ ಭೂತಾಳಿ, ಮಲ್ಲಣ್ಣ ಕುರಕುಂದಿ, ಬಸವರಾಜ ಗುಡಿಮನಿ, ವಿಶ್ವ ನಾಟೇಕರ್ ಇದ್ದರು.

ವರದಿ: ಮಿಲಿಂದ್ ಸಾಗರ, ಸಿಟಿಜನ್ ಜರ್ನಲಿಸ್ಟ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...