ಯಾದಗಿರಿ | ಶಹಾಪುರ ತಾಲೂಕಿನ ಮೂರು ಆರೋಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ಒದಗಿಸಲು ಆಗ್ರಹ

Date:

Advertisements

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡುರು, ಕೊಳ್ಳುರು ಹಾಗೂ ತಡಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಒಟ್ಟು 50 ಗ್ರಾಮಗಳಿವೆ. ಈ ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲು ‘108 ಆ್ಯಂಬುಲೆನ್ಸ್‌’ ಒದಗಿಸಬೇಕು ಎಂದು ಹಲವು ಗ್ರಾಮಗಳ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹತ್ತಿಗೂಡುರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್‌ ನೀಡುವುದರಿಂದ ಗುಡೂರು, ಕೊಂಗಂಡಿ, ಮಂಡಗಳ್ಳಿ, ಸಾವೂರು, ಕಾಟಮನಹಳ್ಳಿ, ಬೀರನೂರು, ಪರಸಾಪುರು, ಮರಕಲ್, ಕೊಳೂರು, ಟಣ್ಣೂರು, ಗೌಡೂರು, ಯಕ್ಷಂತಿ, ಮದರ ಕಲ್, ನಂದಿಹಳ್ಳಿ, ಹಯ್ಯಳ ಬಿ. ಬಸವಂತಪುರ, ಮುನಮುಟ್ಟಿಗಿ, ಬೊಮ್ಮನಹಳ್ಳಿ, ಅನವಾರ್, ಹಯ್ಯಳ (ಕೆ) ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದುಭೀಮ ಆರ್ಮಿ ಜಿಲ್ಲಾ ಉಸ್ತುವಾರಿ ಶರಣರೆಡ್ಡಿ ಹತ್ತಿಗೂಡುರ್ ತಿಳಿಸಿದ್ದಾರೆ.

ಈ ಗ್ರಾಮಗಳ ಸುತ್ತು-ಮುತ್ತ ಎಲ್ಲಿಯಾದರೂ ಅಪಘಾತ ಸಂಭವಿಸದರೆ ಅಥವಾ ತುರ್ತು ಆರೋಗ್ಯ ಸಮಸ್ಯೆಯಾದರೆ, ಆ್ಯಂಬುಲೆನ್ಸ್‌ ಸಿಗದೆ ಪರದಾಡುವ ಪರಿಸ್ತಿತಿ ಇದೆ. ಹೀಗಾಗಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisements

“ಗ್ರಾಮದ ಸಾರ್ವಜನಿಕರಿಗೆ ಹೆಚ್ಚಿನ ರೀತಿಯಿಂದ ಆರೋಗ್ಯ ವ್ಯವಸ್ಥೆ ಕಲ್ಪಿಸಲು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಈ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್‌ ನೀಡಬೇಕು” ಎಂದು ಶರಣರೆಡ್ಡಿ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಳೆಯಲ್ಲಿಯೇ ಮುಂದುವರೆದ ಆಶಾ ಕಾರ್ಯಕರ್ತೆಯರ ಧರಣಿ

ಮುಖ್ಯಮಂತ್ರಿಗಳು ಕೊಟ್ಟ 10 ಗ್ಯಾರಂಟಿ ಭರವಸೆಯ ಮಾತನ್ನು ಉಳಿಸಿಕೊಳ್ಳಬೇಕು, ನಿವೃತ್ತಿ ಆಶಾಗಳಿಗೆ...

ಯಾದಗಿರಿ | ಆಸರೆಯಾಗಿದ್ದ ಮನೆಯೂ ಮಳೆಗೆ ಕುಸಿತ: ನೆರವಿನ ನಿರೀಕ್ಷೆಯಲ್ಲಿ ದೋರನಹಳ್ಳಿ ನಿವಾಸಿ ಅಮಲವ್ವ

ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮದ ನಿವಾಸಿಯಾಗಿರುವ ಅಮಲವ್ವ ಕಡು ಬಡ ಕುಟುಂಬದವರಾಗಿದ್ದು,...

ಯಾದಗಿರಿ | ಆ.14ರಂದು ಪ್ರತಿಭಟನೆಗೆ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ಕರೆ

ಬುಧವಾರ ಯಾದಗಿರಿ ನಗರದ ಪ್ರವಾಸಿ ಮಂದಿರದಲ್ಲಿ ಬಲಗೈ ಸಮುದಾಯಗಳ ಒಳ ಮೀಸಲಾತಿ...

ಯಾದಗಿರಿ | ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

ಸಮರ್ಪಕವಾಗಿ ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ...

Download Eedina App Android / iOS

X