ಯಾದಗಿರಿ | ಶಹಾಪುರ ತಾಲೂಕಿನ ಮೂರು ಆರೋಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ಒದಗಿಸಲು ಆಗ್ರಹ

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡುರು, ಕೊಳ್ಳುರು ಹಾಗೂ ತಡಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಒಟ್ಟು 50 ಗ್ರಾಮಗಳಿವೆ. ಈ ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲು ‘108 ಆ್ಯಂಬುಲೆನ್ಸ್‌’ ಒದಗಿಸಬೇಕು ಎಂದು ಹಲವು ಗ್ರಾಮಗಳ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹತ್ತಿಗೂಡುರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್‌ ನೀಡುವುದರಿಂದ ಗುಡೂರು, ಕೊಂಗಂಡಿ, ಮಂಡಗಳ್ಳಿ, ಸಾವೂರು, ಕಾಟಮನಹಳ್ಳಿ, ಬೀರನೂರು, ಪರಸಾಪುರು, ಮರಕಲ್, ಕೊಳೂರು, ಟಣ್ಣೂರು, ಗೌಡೂರು, ಯಕ್ಷಂತಿ, ಮದರ ಕಲ್, ನಂದಿಹಳ್ಳಿ, ಹಯ್ಯಳ ಬಿ. ಬಸವಂತಪುರ, ಮುನಮುಟ್ಟಿಗಿ, ಬೊಮ್ಮನಹಳ್ಳಿ, ಅನವಾರ್, ಹಯ್ಯಳ (ಕೆ) ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದುಭೀಮ ಆರ್ಮಿ ಜಿಲ್ಲಾ ಉಸ್ತುವಾರಿ ಶರಣರೆಡ್ಡಿ ಹತ್ತಿಗೂಡುರ್ ತಿಳಿಸಿದ್ದಾರೆ.

ಈ ಗ್ರಾಮಗಳ ಸುತ್ತು-ಮುತ್ತ ಎಲ್ಲಿಯಾದರೂ ಅಪಘಾತ ಸಂಭವಿಸದರೆ ಅಥವಾ ತುರ್ತು ಆರೋಗ್ಯ ಸಮಸ್ಯೆಯಾದರೆ, ಆ್ಯಂಬುಲೆನ್ಸ್‌ ಸಿಗದೆ ಪರದಾಡುವ ಪರಿಸ್ತಿತಿ ಇದೆ. ಹೀಗಾಗಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗ್ರಾಮದ ಸಾರ್ವಜನಿಕರಿಗೆ ಹೆಚ್ಚಿನ ರೀತಿಯಿಂದ ಆರೋಗ್ಯ ವ್ಯವಸ್ಥೆ ಕಲ್ಪಿಸಲು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಈ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್‌ ನೀಡಬೇಕು” ಎಂದು ಶರಣರೆಡ್ಡಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕುಡಿಯುವ ನೀರಿಗಾಗಿ ಪರದಾಟ, ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸಣ್ಣ ಸಂಭರ ಗ್ರಾಮಕ್ಕೆ ಸಮರ್ಪಕದ ಕುಡಿಯುವ...

ಯಾದಗಿರಿ | ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಈ ಸಾಫ್ ಹಾಗೂ ವರ್ಲ್ಡ್ ವಿಷನ್ ಇಂಡಿಯಾ...

ಯಾದಗಿರಿ | ನಗರಸಭೆ ಸಿಬ್ಬಂದಿಗಳ ವರ್ಗಾವಣೆಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

ಯಾದಗಿರಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾವತಿ ಹಾಗೂ ಸೀನಿಯರ್ ಪ್ರೋಗ್ರಾಮರ್ ಮಲ್ಲಪ್ಪ ಅವರನ್ನು...

ಯಾದಗಿರಿ | ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟನೆ ಮುಂದೂಡುವಂತೆ ಮನವಿ

ಯಾದಗಿರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಕಟ್ಟಡದ ಕಾಮಗಾರಿ ಅಪೂರ್ಣವಾಗಿದ್ದರೂ, ತರಾತುರಿಯಲ್ಲಿ...