ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಕಲಬುರಗಿಯ ಕೊಟನೂರು ಮತ್ತು ಯಾದಗಿರಿಯ ತಡಿಬಿಡಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ  ಕೈಗೊಳ್ಳಬೇಕೆಂದು ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ ಶರಣು ಎಸ್. ನಟೇಕರ, “ದೇಶಕ್ಕೆ ಸಂವಿಧಾನ ಕೊಟ್ಟ ಜ್ಞಾನಿಗೆ ಇಲ್ಲಿನ ಅಜ್ಞಾನಿಗಳು ಅವಮಾನ ಮಾಡಿದ್ದಾರೆ. ಘಟನೆಯ ಅಕ್ಷಮ್ಯವಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ಗಡಿಪಾರು ಮಾಡಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಘಟನೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡಿದ್ದು, ಅವರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚನೆ ಮಾಡಬೇಕು” ಎಂದು ಇತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನೆಯಲ್ಲಿ ಭೀಮರಾಯ ಸಿಂಧಿಗೇರಿ, ಶಿವಶಂಕರ ವಾಡಿ, ಶಿವಶಂಕರ ಕಲ್ಬುರ್ಗಿ, ಭೀಮರಾಯ ಕರಣೆಗಿ, ಮಲ್ಲಪ್ಪ ಲಂಡನಕರ್,ಶರಣು ಆಲಳ್ಳಿ, ಸಿದ್ದರಾಮ ನಾಯ್ಕಲ್, ಮಲ್ಲಿಕಾರ್ಜುನ ತಾಳವಾರಗೇರಿ, ಪ್ರಭು ಕಚಕನೂರ,ಶರಣಪ್ಪ ಯರಗೋಳ, ಸೈಬಣ್ಣ ಯಂಪಾಡ, ಸಲಿಮ್ ಅಹ್ಮದ್, ಮೌನೇಶ ಮ್ಯಾಗೇರಿ, ಬಸವರಾಜ, ಬಸವರಾಜ ಕೆಂಭಾವಿ, ರಾಜು ಕೊಂಕಲ್, ನಿರ್ಮಲಾ ಅರಿಕೇರಿ, ಸುಶೀಲಮ್ಮ ಯಲ್ಲತ್ತಿ, ಚಂದಮ್ಮ, ದೇವಮ್ಮ,ನಿರ್ಮಲಾ ಎಸ್. ನಾಟೇಕರ್, ಹುಲುಗಮ್ಮ,ಭೀಮಾಶಂಕರ ಈಟೆ, ಆಂಜನೇಯ ಬುಡ್ಗಜಂಗಮ, ನಿರ್ಮಲಾ ಇನ್ನಿತರರು ಉಪಸ್ಥಿತರಿದ್ದರು..

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...