ಯಾದಗಿರಿ | ಖಾಸಗಿ ಶಾಲೆಗಳ ವ್ಯಾಮೋಹ ಬೇಡ; ಸರ್ಕಾರಿ ಶಾಲೆಯಲ್ಲೇ ಮಕ್ಕಳ ಭವಿಷ್ಯ ರೂಪಿಸಿ”: ವೆಂಕಟೇಶ ಎಚ್ ದೊರೆ

Date:

ಖಾಸಗಿ ಶಾಲೆಗಳ ವ್ಯಾಮೋಹ ಬೇಡ ಸರ್ಕಾರಿ ಶಾಲೆಯಲ್ಲೇ ಮಕ್ಕಳ ಭವಿಷ್ಯ ರೂಪಿಸಿ ಎಂದು ವೆಂಕಟೇಶ ಎಚ್. ದೊರೆ ಹೇಳಿದರು.

- Advertisement -

ಶಹಾಪುರ ತಾಲೂಕಿನ ಆಲ್ದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಆಂದೋಲನ ಸೋಮವಾರದಿಂದ ಆರಂಭಗೊಂಡಿದೆ. ಪ್ರಸಕ್ತ ವರ್ಷದಿಂದ ಎಲ್‌ಕೆಜಿ, ಯುಕೆಜಿ ಹಾಗೂ 1ರಿಂದ 5ನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮದ ತರಗತಿಗಳನ್ನು ಆರಂಭಿಸಿರುವುದು ಪೋಷಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಶಾಲೆ ಆರಂಭದ ಮೊದಲ ದಿನವೇ ವೆಂಕಟೇಶ ಎಚ್. ದೊರೆ ಅವರು ತಮ್ಮ ಮಕ್ಕಳಾದ ಹರ್ಷವರ್ಧನ್, ಆರ್ಯವರ್ಧನ್ ಹಾಗೂ ಸುದೀಪ್ ಅವರನ್ನು ಎಲ್‌ಕೆಜಿ, ಯುಕೆಜಿ ಹಾಗೂ ಇಂಗ್ಲಿಷ್ ಮಾಧ್ಯಮದ ತರಗತಿಗಳಿಗೆ ದಾಖಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

“ನಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲೇ ಉಚಿತವಾಗಿ ಇಂಗ್ಲಿಷ್ ಮಾಧ್ಯಮ ಶಿಕ್ಷಣ ದೊರೆಯುತ್ತಿದೆ. ಹೀಗಾಗಿ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸಾವಿರಾರು ರೂಪಾಯಿ ವೆಚ್ಚ ಮಾಡುವ ಬದಲು ಸರ್ಕಾರಿ ಶಾಲೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡಬೇಕು” ಎಂದು ಮನವಿ ಮಾಡಿದರು.

ಆಲ್ದಾಳ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅಗತ್ಯ ದಾಖಲೆಗಳೊಂದಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಬಹುದಾಗಿದೆ ಎಂದು ತಿಳಿಸಿದರು.

ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಹಾಗೂ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಆರಂಭಿಸಬೇಕೆಂದು 2024ರ ಆಗಸ್ಟ್ 12ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆ ಮನವಿಗೆ ಸ್ಪಂದಿಸಿ ಯೋಜನೆ ಜಾರಿಗೊಳಿಸಿದ ಶಿಕ್ಷಣ ಇಲಾಖೆಯನ್ನು ಹಾಗೂ ಅಧಿಕಾರಿಗಳನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಹೋರಾಟದ ಗೆಲುವು: ಮುಚ್ಚುವ ಭೀತಿಯಲ್ಲಿದ್ದ ಸರ್ಕಾರಿ ಶಾಲೆಗಳು ಪುನರಾರಂಭ

ಶಾಲೆಯ ಪ್ರಭಾರಿ ಮುಖ್ಯಗುರು ಈರಣ್ಣ ನಾಯಕ್ ಮಾತನಾಡಿ, “ಇಂಗ್ಲಿಷ್ ಮಾಧ್ಯಮ ಮತ್ತು ಎಲ್‌ಕೆಜಿ-ಯುಕೆಜಿ ತರಗತಿಗಳ ಆರಂಭದಿಂದ ಪೋಷಕರಲ್ಲಿ ಹೊಸ ಆಶಾಕಿರಣ ಮೂಡಿದ್ದು, ಮೊದಲ ದಿನವೇ ಉತ್ತಮ ಸ್ಪಂದನೆ ವ್ಯಕ್ತವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಮುನಾಯಕ್ ಹಾಲಿಗೇರ, ಲಕ್ಷ್ಮಣನಾಯಕ್ ಹಾಲಿಗೇರ, ಮಾಳಿಂಗರಾಯ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...