ಶಹಾಪುರ ತಾಲೂಕಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆ, ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಮುಗಿಬಿದ್ದಿರುವ ದೃಶ್ಯಗಳು ಕಂಡುಬಂದಿವೆ.
ಪಟ್ಟಣದ ಹಿರೇಮಠ್ ಪೆಟ್ರೋಲ್ ಪಂಪ್ ಸೇರಿದಂತೆ ಅನೇಕ ಪಂಪ್‌ಗಳಲ್ಲಿ ವಾಹನ ಸವಾರರು ದೀರ್ಘ ಸಾಲಿನಲ್ಲಿ ನಿಂತು ಇಂಧನ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಇಂಧನ ಸಿಗುತ್ತದೆಯೋ ಇಲ್ಲವೋ ಎಂಬ ಆತಂಕ ಜನರಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇದಲ್ಲದೆ, ಕಳೆದ ಒಂದು ವಾರದಿಂದ ಅಡುಗೆ ಅನಿಲ (ಗ್ಯಾಸ್ ಸಿಲಿಂಡರ್) ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ಜನರು ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಅಭಾವದಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಕೇಂದ್ರ ಬಸ್ ನಿಲ್ದಾಣದಲ್ಲಿ ದುರ್ಘಟನೆ: ಬಸ್ ಡಿಕ್ಕಿಗೆ ಮಹಿಳೆ ಸಾವು!
ಈ ಹಿನ್ನೆಲೆಯಲ್ಲಿ ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಧ್ಯಪ್ರವೇಶಿಸಿ ಅಡುಗೆ ಅನಿಲ ಹಾಗೂ ಪೆಟ್ರೋಲ್–ಡೀಸೆಲ್ ಸರಬರಾಜನ್ನು ಸುಗಮಗೊಳಿಸಿ, ಇಂಧನ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಆಗ್ರಹಿಸಿದ್ದಾರೆ.




