ಯಾದಗಿರಿ | ಎಸ್‌ಐಆರ್ ವಿರೋಧಿಸಿ ಮೇ 30ರಂದು ಬೃಹತ್ ಪ್ರತಿಭಟನೆಗೆ ಪ್ರಗತಿಪರರ ಕರೆ

Date:

ಎಸ್‌ಐಆರ್ ವಿರೋಧಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ವತಿಯಿಂದ ಎಸ್‌ಐಆರ್ ಕುರಿತು ಸಮಾಲೋಚನಾ ಸಭೆ ಮಂಗಳವಾರ ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಜಾತ್ಯತೀತ ಪಕ್ಷಗಳ ಕಾರ್ಯಕರ್ತರು ಹಾಗೂ ವಿವಿಧ ಜನವರ್ಗಗಳ ಮತದಾರರು ಭಾಗವಹಿಸಿ ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

- Advertisement -

ಸಭೆಯಲ್ಲಿ ಅಹಿಂದ ಮುಖಂಡ ಭೀಮಣ್ಣ ಮೇಟಿ ಹಾಗೂ ದಸಂಸ ಹಿರಿಯ ಮುಖಂಡ ಮರೆಪ್ಪ ಚಟ್ಟೇಕರ್ ಮಾತನಾಡಿ, “ಎಸ್‌ಐಆರ್ ಎಂಬುದು ಅಸಂವಿಧಾನಿಕ, ಅವೈಜ್ಞಾನಿಕ, ದೋಷಪೂರಿತ ಹಾಗೂ ದುರುದ್ದೇಶಪೂರಿತ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯಾಗಿದ್ದು, ಇದರ ಮೂಲಕ ಸಾಮಾನ್ಯ ಮತದಾರರ ಹಕ್ಕುಗಳನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಈ ಪ್ರಕ್ರಿಯೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ದೇಶದ ಸಂವಿಧಾನಬದ್ಧ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರುವ ಸಾಧ್ಯತೆ ಇದೆ” ಎಂದು ಅವರು ಅಭಿಪ್ರಾಯಪಟ್ಟರು.

ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಬಡವರು, ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕುಗಳನ್ನು ದುರ್ಬಲಗೊಳಿಸುವ ಸಂಚು ನಡೆಯುತ್ತಿದೆ ಎಂದು ಕೆಲ ಮುಖಂಡರು ಕಿಡಿಕಾರಿದರು. ಸರ್ಕಾರ ಹಾಗೂ ಚುನಾವಣಾ ಆಯೋಗವು ಜನರಲ್ಲಿ ಗೊಂದಲ ಸೃಷ್ಟಿಸುವ ಬದಲು ಪಾರದರ್ಶಕ ಮತ್ತು ಸಂವಿಧಾನಬದ್ಧ ವಿಧಾನಗಳನ್ನು ಅನುಸರಿಸಬೇಕು ಎಂದು ಆಗ್ರಹಿಸಿದರು.

1892370

ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರತಿರೋಧ ವೇದಿಕೆ ವತಿಯಿಂದ ಮೇ 30ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನಾ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಯಾದಗಿರಿಯಲ್ಲಿಯೂ ದೊಡ್ಡ ಪ್ರಮಾಣದ ಹೋರಾಟ ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ಸಾಹಿತಿಗಳು, ಕಲಾವಿದರು, ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಸಮಾವೇಶಗೊಂಡು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖಂಡರು ತಿಳಿಸಿದರು.

ಸಭೆಯಲ್ಲಿ ಅಹಿಂದ ಸಂಘದ ಜಿಲ್ಲಾ ಅಧ್ಯಕ್ಷ ಹನುಮೇಗೌಡ, ಜಿಲ್ಲಾ ಅಧ್ಯಕ್ಷ ಇರ್ಫಾನ್ ಬಾದಲ್ ಮತನಾಡಿ, “ಮತದಾನದ ಹಕ್ಕು ಎನ್ನುವುದು ಪ್ರಜಾಪ್ರಭುತ್ವದ ಅಸ್ತಿತ್ವದ ಮೂಲಾಧಾರ. ಆ ಹಕ್ಕಿನ ಮೇಲೆ ಯಾವುದೇ ರೀತಿಯ ಧಕ್ಕೆ ತರುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

ಮೇ 30ರಂದು ನಡೆಯುವ ಸತ್ಯಾಗ್ರಹದಲ್ಲಿ ಜಿಲ್ಲೆಯ ಸಾಹಿತಿಗಳು, ಕಲಾವಿದರು, ಯುವಕರು, ಮಹಿಳೆಯರು, ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಉಳಿಸುವ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು. ಇದೇ ವೇಳೆ ಪ್ರತಿಭಟನೆಗೆ ಸಂಬಂಧಿಸಿದ ಕರಪತ್ರವನ್ನು ಮುಖಂಡರು ಬಿಡುಗಡೆಗೊಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ವಿಭೂತಿಹಳ್ಳಿ ರಸ್ತೆ ವಿವಾದ: ತಾ.ಪಂ ಎದುರು ದಲಿತರ ದೀಢಿರ್ ಪ್ರತಿಭಟನೆ

ಈ ಸಂದರ್ಭದಲ್ಲಿ ತಂಜುಮನ್ ಬೈತುಲ್ ಮಹಲ್ ಫಂಕ್ಷನ್ ಹಾಲ್, ಗೋಪಾಲ ತೆಳಿಗೇರಿ DSS ಮುಖಂಡರು, ಭೀಮರಾಯ ಹೊಸಮನಿ, ಸೈದಪ್ಪ ಕುಲೂರ್, ನಿಂಗಪ್ಪ ಕೊಲ್ಲೂರ್ ಧಮ್ಮಚಾರಿಗಳು, ಫಕೀರ ಅಹಮ್ಮದ್ ವಡಿಗೇರ್ ರೈತ ಸಂಘ, ಹೊನ್ನಪ್ಪ ಪೂಜಾರಿ,ನಿಂಗಪ್ಪ ಮುರಡಿ, ಮಲ್ಲೇಶಿ ಅನಕಸೂಗೂರ, ಹಣಮಂತ ಗುರುಸುಣಿಗಿ, ವಾಹಿದ್ ಮಿಯಾ, ಇನಾಯತ್, ಮನ್ಸೂರ್ ಅಹ್ಮದ್, ವಾಸೆ, ಜಾಗೀರ್ದಾರ್, ಚಂದ್ರಮಪ್ಪ, ಸಾಬಣ್ಣ ಕರವೇ, ಶರಣಗೌಡ, ಆನಂದ್ ಭಜಂತ್ರಿ, ಮಹದೇವಪ್ಪ ಗುರುಸುಣಿಗಿ, ಬಾಪುಗೌಡ ಪಾಟೀಲ್, ಹೊನ್ನೆಶ ದೊಡ್ಡಮನಿ ಮಲ್ಲಪ್ಪ ತಡಿಬಿಡಿ, ಸಿದ್ರಾಮಪ್ಪ ನಾಯ್ಕಲ್, ಶಿವಶಂಕರ ಸುರುಪುರು, ಮಲ್ಲಪ್ಪ ಸುರುಪುರು, ಮರಲಿಂಗ ಸಾವೂರ್, ಮಲ್ಲು ಆರಭೋಳ, ರಾಹುಲ್ ಕೊಲ್ಕುರ್ ಸೇರಿದಂತೆ ಅನೇಕ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...