ಯಾದಗಿರಿ | ಸಿದ್ದರಾಮಯ್ಯ ಬೆಂಬಲಿಸಿ ಪ್ರತಿಭಟನೆ: ವಿಷ ಕುಡಿಯಲು ಯತ್ನಿಸಿದ ಅಭಿಮಾನಿಗಳು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಅಭಿಮಾನಿಯೊಬ್ಬರು ವಿಷ ಕುಡಿಯಲು ಯತ್ನಿಸಿದ ಘಟನೆ ಉದ್ವಿಗ್ನತೆಗೆ ಕಾರಣವಾಯಿತು.

- Advertisement -

ನಗರದ ನೇತಾಜಿ ಸುಭಾಷ ಚಂದ್ರ ಬೋಸ್ ಸರ್ಕಲ್ ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಾನವ ಸರಪಳಿ ರಚಿಸಿ ವಾಹನಗಳ ಸಂಚಾರ ತಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಕೆಲವರು ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ತಡೆದರು. ಬಳಿಕ ಪ್ರತಿಭಟನಾಕಾರರು ವೃತ್ತದ ಸುತ್ತ ನೂರಾರು ಜನರೊಂದಿಗೆ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಳಿಸಿದರು.

ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಟೈರ್‌ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಯತ್ನಿಸಿದಾಗ ಪೊಲೀಸರು ನೀರು ಹಾಕಿ ಬೆಂಕಿ ನಂದಿಸಲು ಮುಂದಾದರು. ಇದೇ ವೇಳೆ ಸಿದ್ದರಾಮಯ್ಯ ಅಭಿಮಾನಿಯಾಗಿರುವ ಭೀಮು ಪೂಜಾರಿ ಎಂಬವರು, “ಬೆಂಕಿ ಹಚ್ಚಿದಕ್ಕೆ ಇಷ್ಟೊಂದು ಸಂಕಷ್ಟ ಆಗುತ್ತಿದೆ. ಸಿದ್ದರಾಮಯ್ಯ ಅವರಿಗಾಗಿ ವಿಷ ಕುಡಿಯುತ್ತೇನೆ” ಎಂದು ಹೇಳಿ ಜೇಬಿನಿಂದ ವಿಷದ ಬಾಟಲಿ ತೆಗೆದು ಕುಡಿಯಲು ಯತ್ನಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಭೀಮಾ ನದಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು!

ಆದರೆ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಪ್ರತಿಭಟನಾಕಾರರು ತಕ್ಷಣವೇ ಅವರನ್ನು ತಡೆದು ವಿಷದ ಬಾಟಲಿಯನ್ನು ಕಸಿದುಕೊಂಡರು. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...