ಯಾದಗಿರಿ | ಎಸ್‌ಐಆರ್; “ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ”: ಮರೆಪ್ಪ ಚಟ್ಟೇರಕರ್

Date:

“ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ” ಎಂಬ ಮಾನವೀಯ ತತ್ವದೊಂದಿಗೆ ನಡೆಯಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪ ಚಟ್ಟೇರಕರ್ ಆಗ್ರಹಿಸಿದರು.

- Advertisement -

ದಲಿತ ಸಂಘರ್ಷ ಸಮಿತಿ (ರಿ), ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ‘ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್ ಮತದಾನರ ಪರಿಷ್ಕರಣೆಯ ಈ ಪ್ರಕ್ರಿಯೆಯಲ್ಲಿ ಒಬ್ಬರೂ ಅರ್ಹ ಮತದಾರರು ಹೊರಗುಳಿಯಬಾರದು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1598351

‘ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಗ್ರಾಮೀಣ ಬಡಜನರು ದಾಖಲೆಗಳ ಕೊರತೆಯಿಂದ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮಾದರಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಮತದಾರರ ನೆರವು ಕೇಂದ್ರಗಳನ್ನು ಸ್ಥಾಪಿಸಿ, ಸಹಾಯವಾಣಿ ಆರಂಭಿಸಬೇಕು ಎಂದು ಸಮಿತಿ ಸೂಚಿಸಿದೆ. ಅದೇ ರೀತಿ ಕೇರಳ ಮಾದರಿಯಲ್ಲಿ ದಾಖಲೆಗಳಿಲ್ಲದ ಅರ್ಹ ನಾಗರಿಕರಿಗೆ ತ್ವರಿತವಾಗಿ ವಾಸ ದೃಢೀಕರಣ ಹಾಗೂ ಜಾತಿ ಪ್ರಮಾಣಪತ್ರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಮೊದಲು ಗ್ರಾಮಸಭೆ/ವಾರ್ಡ್ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ಕರಡು ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ತಿದ್ದುಪಡಿಗಳಿಗೆ ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು.

‘ಆಡಾಹುಡಿಯಲ್ಲಿನ ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ ಎಂದು ಸಮಿತಿ ಎಚ್ಚರಿಕೆ ನೀಡಿದೆ. ಅಂತಹ ಪಟ್ಟಿಯ ಆಧಾರದ ಮೇಲೆ ಚುನಾವಣೆ ನಡೆಸಲು ಅವಕಾಶ ನೀಡುವುದಿಲ್ಲ’ ಎಂದು ತಿಳಿಸಿದರು.

‘ನಾಗರಿಕರ ಮತದಾನದ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳ ಜೊತೆಗೆ ಸರ್ಕಾರದ ಮೇಲಿದೆ ಎಂದು ಸಮಿತಿ ತಿಳಿಸಿದ್ದು, ಅಗತ್ಯ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೇಂದ್ರ ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಅಕ್ರಮ ಆರೋಪ: ರಾಜ್ಯ-ಕೇಂದ್ರ ಮಟ್ಟದಲ್ಲಿ ತೀವ್ರ ಚರ್ಚೆ

ಈ ಸಂದರ್ಭದಲ್ಲಿ ಸೈದಪ್ಪ ಕೊಲೂರು, ಮರೆಪ್ಪ ಬಿ ಜಾಲಿಬೆಂಚಿ, ಬಸವರಾಜ್ ಗುಡಿಮನಿ,ಸೈದಪ್ಪ ಕೊಲೂರ್, ಭೀಮರಾಯ ಟಿ ಸೈದಾಪೂರ್, ಭೀಮರಾಯ ಹೊಸಮನಿ, ನಿಂಗಪ್ಪ ತಿಪ್ಪನಳ್ಳಿ, ಹಣಮಂತ್ರಾಯ ಮಿಲ್ಟ್ರಿ, ಪರಶುರಾಮ ಒಡೆಯರ್, ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...