ಯಾದಗಿರಿ | ಕೆಜಿಬಿ ಬ್ಯಾಂಕ್ ಮೇಲ್ದರ್ಜೆಗೆರಿಸುವಂತೆ ವೆಂಕಟೇಶ ನಾಯಕ ಆಗ್ರಹ

Date:

ಶಹಾಪುರ ತಾಲೂಕಿನ ವನದುರ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ (ಕೆಜಿಬಿ) ಶಾಖೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ನಗದು ಅಭಾವದಿಂದ ಗ್ರಾಮೀಣ ಭಾಗದ ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಬ್ಯಾಂಕ್ ಅನ್ನು ಮೇಲ್ದರ್ಜೆಗೇರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಶಹಪುರ ತಾಲೂಕು ಯುವ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಆಲ್ದಾಳ ಒತ್ತಾಯಿಸಿದರು.

- Advertisement -

ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿ ಅವರು ‘ಗ್ರಾಮೀಣ ಭಾಗದ ರೈತರು ಹಾಗೂ ಜನಸಾಮಾನ್ಯರ ಆರ್ಥಿಕ ಬೆನ್ನೆಲುಬಾಗಿರುವ ಈ ಬ್ಯಾಂಕಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು, ಗ್ರಾಹಕರು ಕುಳಿತುಕೊಳ್ಳಲು ಆಸನಗಳ ಕೊರತೆ, ಪ್ಯಾನ್ಗಳು ಹಾಳಾಗಿರುವುದು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಪ್ರತಿದಿನ ಬ್ಯಾಂಕಿಗೆ ಬರುವ ಗ್ರಾಹಕರು ಬಿಸಿಲಿನಲ್ಲಿ ಹಾಗೂ ಅಸೌಕರ್ಯಗಳ ನಡುವೆ ಪರದಾಡುವಂತಾಗಿದೆ’ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

‘ಬ್ಯಾಂಕಿನ ದಿನನಿತ್ಯದ ವ್ಯವಹಾರದ ಮಿತಿಯನ್ನು ಕೇವಲ 10 ಲಕ್ಷ ರೂಪಾಯಿಗಳಿಗೆ ಸೀಮಿತಗೊಳಿಸಿರುವುದರಿಂದ ಗ್ರಾಹಕರಿಗೆ ಅಗತ್ಯ ಪ್ರಮಾಣದ ಹಣ ಸಿಗುತ್ತಿಲ್ಲ. ಹೆಚ್ಚಿನ ಮೊತ್ತದ ಹಣದ ಅವಶ್ಯಕತೆ ಇದ್ದರೂ ಬ್ಯಾಂಕಿನಲ್ಲಿ ಕೇವಲ 20 ಸಾವಿರದಿಂದ 50 ಸಾವಿರ ರೂಪಾಯಿವರೆಗೆ ಮಾತ್ರ ನೀಡಲಾಗುತ್ತಿದೆ. ಇದರಿಂದ ವ್ಯಾಪಾರಸ್ಥರು ಹಾಗೂ ತುರ್ತು ಅಗತ್ಯವಿರುವ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಹೇಳಿದರು.

1893347

‘ಪ್ರಸ್ತುತ ಮುಂಗಾರು ಆರಂಭವಾಗಿರುವ ಹಿನ್ನೆಲೆ ರೈತರು ಬಿತ್ತನೆ ಬೀಜ ಹಾಗೂ ಗೊಬ್ಬರ ಖರೀದಿಗಾಗಿ ಹಣದ ಅವಶ್ಯಕತೆಯಲ್ಲಿದ್ದಾರೆ. ಬ್ಯಾಂಕಿನ ಪ್ರಮುಖ ಗ್ರಾಹಕರೇ ರೈತರಾಗಿದ್ದರೂ, ತಮ್ಮ ಖಾತೆಯಲ್ಲಿ ಹಣವಿದ್ದರೂ ಕೂಡ ಸಕಾಲಕ್ಕೆ ಹಣ ಪಡೆಯಲು ಸಾಧ್ಯವಾಗುತ್ತಿಲ್ಲ. ಸಾಲ ಮಂಜೂರಾಗಿದ್ದರೂ ನಗದು ಕೊರತೆಯಿಂದ ರೈತರು ಬ್ಯಾಂಕ್‌ಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕಕ್ಕಸಗೇರಾ, ಬುದನೂರ, ಆಲ್ದಾಳ, ಚನ್ನೂರ ಕೆ ಹಾಗೂ ವನದುರ್ಗ ಸೇರಿದಂತೆ ಅನೇಕ ಗ್ರಾಮಗಳ ಜನರು ಇದೇ ಬ್ಯಾಂಕ್ ಶಾಖೆಯ ಮೇಲೆ ಅವಲಂಬಿತರಾಗಿದ್ದಾರೆ. ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಶಾಖೆಯನ್ನು ಪ್ರಸ್ತುತ ಜನಸಂಖ್ಯೆ ಹಾಗೂ ಹೆಚ್ಚುತ್ತಿರುವ ಗ್ರಾಹಕರ ವಹಿವಾಟಿನ ಆಧಾರದ ಮೇಲೆ ಮೇಲ್ದರ್ಜೆಗೇರಿಸುವ ಅಗತ್ಯವಿದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಎಸ್‌ಐಆರ್ ವಿರೋಧಿಸಿ ಮೇ 30ರಂದು ಬೃಹತ್ ಪ್ರತಿಭಟನೆಗೆ ಪ್ರಗತಿಪರರ ಕರೆ

‘ಸಂಬಂಧಪಟ್ಟ ಉನ್ನತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಗಮನಹರಿಸಿ ಬ್ಯಾಂಕಿನ ದಿನದ ವ್ಯವಹಾರದ ಮಿತಿಯನ್ನು ಹೆಚ್ಚಿಸಬೇಕು, ನಗದು ಕೊರತೆಯನ್ನು ನೀಗಿಸಬೇಕು ಹಾಗೂ ರೈತರು ಮತ್ತು ಸಾರ್ವಜನಿಕರಿಗೆ ಸೂಕ್ತ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...