ಯಾದಗಿರಿ | ದೋರನಹಳ್ಳಿಯಲ್ಲಿ ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Date:

ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಶನಿವಾರ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು.

- Advertisement -

ಮಾತೆ ಸಾವಿತ್ರಿಬಾಯಿ ಫುಲೆ ಸಾಮಾಜಿಕ ಶಿಕ್ಷಣ ಟ್ರಸ್ಟ್‌ (ರಿ), ದೋರನಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಫುಲೆಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
935639

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡ ಮರೆಪ್ಪ ಚಟ್ಟೇಕರ್ ಮಾತನಾಡಿ, ಶೋಷಿತ ಸಮುದಾಯಗಳಿಗೆ ಶಿಕ್ಷಣದ ಮೂಲಕ ಸಮಾನತೆ ಮತ್ತು ಗೌರವಯುತ ಜೀವನ ಕಲ್ಪಿಸುವಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದರು.

‘ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿ, ಸರ್ವರಿಗೂ ಸಮಪಾಲು–ಸಮಬಾಳಿನ ಆಶಯದೊಂದಿಗೆ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ’ ಎಂದು ಹೇಳಿದರು.

IMG 20251228 WA0818

ಕಾರ್ಯಕ್ರಮವನ್ನು ಉದ್ಘಾಟಿಸಿದ ಅಹಿಂದ ಮುಖಂಡ ಹಣಮೇಗೌಡ ಬೀರನಕಲ್ ಮಾತನಾಡಿ, ‘ಸಾವಿತ್ರಿಬಾಯಿ ಫುಲೆ ಎಲ್ಲರಿಗೂ ಶಿಕ್ಷಣ ನೀಡಿದ ಮಹಾನ್ ಚೇತನ. ಇಂದು ನಾವು ಸಮಾನವಾಗಿ ವೇದಿಕೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗಿರುವುದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಫಲ. ಶೋಷಿತರ ಧ್ವನಿಯಾಗಿ ನಾವೆಲ್ಲರೂ ಕೆಲಸ ಮಾಡಬೇಕು’ ಎಂದು ಹೇಳಿದರು.

936119 2

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿನೋದಗೌಡ ಮಾಲಿ ಪಾಟೀಲ್, ನಿಜಾಗುಣ ದೋರನಹಳ್ಳಿ, ಶರಣು ಟಿ. ಬಿರನೂರ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮರೆಪ್ಪ ಕಸನ್, ಮಲ್ಲಿಕಾರ್ಜುನ ಚಲುವಾದಿ, ಮರಲಿಂಗಪ್ಪ ರೆಡ್ಡಿ, ಮರಿಲಿಂಗಪ್ಪ, ಮಾನಪ್ಪ ಸಗರ, ಭೀಮರಾಯ ಚಾಮನಾಳ, ಸಂಗಣ್ಣ ರಾಕಂಗೇರಾ, ಪರಶುರಾಮ ಕುದುರಿ, ಅಂಬರೀಶ್ ರಾಕಂಗೇರಾ ಅವರಿಗೆ ವಿಶೇಷ ಸನ್ಮಾನ ಮಾಡಲಾಯಿತು.

935578

ಈ ವೇಳೆ ವಿನೋದಗೌಡ, ಚಿದಾನಂದ ಬಡಿಗೇರ, ಭಾಗಣ್ಣಗೌಡ ದೋರನಹಳ್ಳಿ, ಸಿದ್ದಣ್ಣ ರಾಕಂಗೇರಾ, ಮಾನಪ್ಪ ಹುಲಸೂರು, ನಿಂಗಣ್ಣ ನಾಟೇಕಾರ, ರಾಜು ಅಣಬಿ, ಸಂಗಣ್ಣಗೌಡ ಪೋ. ಪಾಟೀಲ, ಮಲ್ಲಿಕಾರ್ಜುನ ಹೊಸ್ಮನಿ, ಸಿದ್ದಣ್ಣ ದೇಸಾಯಿ, ಮಾನಪ್ಪ ಹಾಲಭಾವಿ, ರಾಯಪ್ಪ ಬೇವಿನಹಳ್ಳಿ, ಹಣಮಂತ ಕುದುರಿ, ಅರಣಕುಮಾರ ಸೈದಾಪೂರ, ವಿಶಾಲ ಸಿಂದೆ, ಅಂಬೇಶಸ್ವಾಮಿ ಹಿರೇಮಠ, ಮಹೇಶ ಪತ್ತಾರ, ಜಗದೀಶ ಬಿದರಾಣಿ, ಸುಧಾಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

936406 1

ಇದನ್ನು ಓದಿದ್ದೀರಾ? ಬೀದರ್‌ | ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯ : ಸಚಿವ ಈಶ್ವರ ಖಂಡ್ರೆ

ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಕೊಳಲು ವಾದನ ಹಾಗೂ ಜನದನಿ ಕಲಾತಂಡ ಬೆಂಗಳೂರು ವತಿಯಿಂದ ಜನಪದ, ಕ್ರಾಂತಿ ಗೀತೆಗಳನ್ನು ಹಾಡುವುದರ ಮೂಲಕ ಜನರನ್ನು ರಂಜಿಸದರು.

ಕಾರ್ಯಕ್ರಮವನ್ನು ವಿಶ್ವ ನಾಟೇಕಾರ್ ನಿರೂಪಿಸಿದರು. ಶಿವಕುಮಾರ್ ಪೋತೆ ಸ್ವಾಗತಿಸಿದರು. ಶೇಖರ್ ಬಡಿಗೇರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...