ಯಾದಗಿರಿ | ಬಂದಳ್ಳಿ ಸಹಾಜ್ ಕಿಡ್ಸ್ ಅಕಾಡೆಮಿಯ 13ನೇ ವಾರ್ಷಿಕೋತ್ಸವ ಸಮಾರಂಭ

Date:

ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿರುವ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದಿನೇಶ್ ಫಾಸ್ಟರ್ ಅವರು ಮಾತನಾಡಿ, ‘ಶಾಲೆ ಎಂಬುದು ಮಕ್ಕಳಿಗೆ ಪಾಠ ಮಾತ್ರವಲ್ಲದೆ ಜೀವನದ ಮೌಲ್ಯಗಳು ಮತ್ತು ಸಂಸ್ಕಾರಗಳನ್ನು ಬೆಳೆಸುವ ಕೇಂದ್ರವಾಗಿದೆ ಎಂದು ಹೇಳಿದರು. ಮಕ್ಕಳು ಭವಿಷ್ಯದಲ್ಲಿ ಮಹತ್ತರ ಸಾಧನೆ ಮಾಡಲು ಶಿಸ್ತು, ಪರಿಶ್ರಮ ಮತ್ತು ಅಭ್ಯಾಸದ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಇಂದಿನ ದಿನಗಳಲ್ಲಿ ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಮಕ್ಕಳಿಗೆ ಓದಲು ಪ್ರೋತ್ಸಾಹ ನೀಡಿ ಉತ್ತಮ ವಾತಾವರಣ ನಿರ್ಮಿಸಬೇಕು’ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಗೌರವಾಧ್ಯಕ್ಷ ಕಾಳಪ್ಪ ಬಡಿಗೇರ್ ಮಾತನಾಡಿ, ‘ವಾರ್ಷಿಕೋತ್ಸವವು ಮಕ್ಕಳ ಪ್ರತಿಭೆ ಅನಾವರಣಗೊಳ್ಳುವ ವೇದಿಕೆಯಾಗಿದ್ದು, ಶಿಸ್ತು, ಸಂಸ್ಕಾರ, ಸ್ವದೇಶಿ ಸಂಸ್ಕೃತಿ, ಭಾಷಾಭಿಮಾನ ಮತ್ತು ಸಮಾಜ ಪರಿವರ್ತನೆ ಶಾಲೆಯ ಮುಖ್ಯ ಗುರಿಗಳಾಗಿವೆ’ ಎಂದು ಹೇಳಿದರು.

ಪ್ರಾಂಶುಪಾಲೆ ಶಶಿಕಲಾ ಬಡಿಗೇರ್ ಅವರು ಶಾಲೆಯ ಸಾಧನೆಗಳ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಮೆಡಲ್ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಪುಟಾಣಿ ಮಕ್ಕಳಿಂದ ನಡೆಸಿದ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ಕಾರ್ಯಕ್ರಮಕ್ಕೆ ಮೆರುಗು ತಂದವು.

ಇದನ್ನು ಓದಿದ್ದೀರಾ? ಕಲಬುರಗಿ | ನಿವೃತ್ತ ಎಎಸ್‌ಐ ಮನೆ ದರೋಡೆ

ಸಮಾರಂಭದಲ್ಲಿ ಶಾಲೆಯ ಅಧ್ಯಕ್ಷ ಸುಭಾಷ್ ಚಂದ್ರ ಬಡಿಗೇರ್, ಪ್ರಾಂಶುಪಾಲ ಮಾರ್ತಂಡಪ್ಪ ಮುಷ್ಠೂರು, ಜನಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಮೈಲಾರಪ್ಪ ಜಹಾಗಿರ್ದಾರ್, ಸಾಯಬಣ್ಣ ಗುತ್ತೇದಾರ ಸೈದಾಪುರ, ಕೃಷ್ಣ ದಾನಸಕೇರಿ, ಮಂಜುನಾಥ್ ಬಡಿಗೇರ್ ಸೇರಿದಂತೆ ಶಾಲಾ ಸಿಬ್ಬಂದಿ, ಪಾಲಕರು, ಪತ್ರಕರ್ತರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...