ಯಾದಗಿರಿ | ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

Date:

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ಆಯೋಜಿಸಲಾದ ಮೂರು ದಿನಗಳ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವು ಸೋಮವಾರ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಯಾಯಿತು.

- Advertisement -

ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸಿ ಮಾತನಾಡಿ, ‘ಗುಡಿ–ಗುಂಡಾರಗಳ ಹೆಸರಿನಲ್ಲಿ ಜನರನ್ನು ಭಯಪಡಿಸಿ ಬಡವರಿಂದ ಹಣ ವಸೂಲಿಸುವ ಪ್ರವೃತ್ತಿ ಇನ್ನೂ ಮುಂದುವರಿದಿರುವುದು ಆತಂಕಕಾರಿ ಎಂದರು. ದೇವರು ಯಾರಿಗೂ ಕೆಡುಕನ್ನು ಮಾಡುವುದಿಲ್ಲ, ಮನುಷ್ಯನೇ ಮನುಷ್ಯನಿಗೆ ಕೆಡುಕು ಮಾಡುತ್ತಾನೆ. ಈ ಅಂಧಶಕ್ತಿಗಳನ್ನು ವೈಜ್ಞಾನಿಕವಾಗಿ ಪ್ರಶ್ನಿಸಿ ಎದುರಿಸುವ ಶಕ್ತಿ ವಿಜ್ಞಾನಕ್ಕಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ವೈಜ್ಞಾನಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಭರವಸೆ’ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
956654

ಸಾನಿಧ್ಯ ವಹಿಸಿದ್ದ ಗುರುಮಠಕಲ್ ಖಾಸಮಠದ ಶಾಂತವೀರ ಗುರುಮುರುಘಾ ರಾಜೇಂದ್ರ ಮಹಾಸ್ವಾಮೀಜಿ, ಅಂಧಶ್ರದ್ಧೆಗಳು ಶತಮಾನಗಳಿಂದ ಸಮಾಜದಲ್ಲಿ ಬೇರೂರಿದ್ದು, ವೈಜ್ಞಾನಿಕ ಚಿಂತನೆ ಮತ್ತು ಜಾಗೃತಿಯಿಂದ ಮಾತ್ರ ಸಮಾಜವನ್ನು ಬೆಳಕಿನತ್ತ ಕರೆದೊಯ್ಯಲು ಸಾಧ್ಯ’ ಎಂದು ಹೇಳಿದರು.

ಇದೆ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ‘ವೈಜ್ಞಾನಿಕ ಸಮ್ಮೇಳನಗಳಿಗೆ ಅಗತ್ಯ ಅನುದಾನ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಮುಂದಿನ ಸಮ್ಮೇಳನವನ್ನು ಬೆಳಗಾವಿಯಲ್ಲಿ ಆಯೋಜಿಸುವ ಆಶಯವನ್ನೂ’ ವ್ಯಕ್ತಪಡಿಸಿದರು.

ಸಮ್ಮೇಳನಾಧ್ಯಕ್ಷ ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಮಾತನಾಡಿ, ‘ಕಲ್ಯಾಣ ಕರ್ನಾಟಕದಲ್ಲಿ ಮೌಢ್ಯತೆ, ಅಂಧನಂಬಿಕೆ ಮತ್ತು ಜಾತಿ ತಾರತಮ್ಯಗಳ ಅಂಧಕಾರ ದೂರವಾಗುವವರೆಗೂ ನಿಜವಾದ ಅಭಿವೃದ್ಧಿ ಸಾಧ್ಯವಿಲ್ಲ’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೋಲಿ, ಕಬ್ಬಲಿಗ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾರ್ಯಕ್ರಮದಲ್ಲಿ ‘ವಿಜ್ಞಾನಗಿರಿ’ ಸ್ಮರಣ ಸಂಚಿಕೆ, 2026ರ ಕ್ಯಾಲೆಂಡರ್ ಹಾಗೂ ದಿನಚರಿಯನ್ನು ಬಿಡುಗಡೆ ಮಾಡಲಾಯಿತು. ವಿವಿಧ ಕ್ಷೇತ್ರಗಳ ಸಾಧಕರಿಗೆ ಜೀವಮಾನ ಸಾಧನಾ ಪ್ರಶಸ್ತಿ ಹಾಗೂ ವಿಶಿಷ್ಟ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಪರಿಷತ್ತಿನ ಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಹಲವಾರು ಗಣ್ಯರು, ಧಾರ್ಮಿಕ ನಾಯಕರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...