ಯಾದಗಿರಿ | ಕಳಪೆ ಬೀಜ, ರಸಗೊಬ್ಬರ ಮಾರಾಟ ಆರೋಪ: ಕ್ರಮಕ್ಕೆ ಕೆಪಿಆರ್‌ಎಸ್‌ ಆಗ್ರಹ

Date:

ಮುಂಗಾರು ಹಂಗಾಮಿಗೆ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಗೆ ಮುಂದಾಗಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟ ಹೆಚ್ಚುತ್ತಿರುವ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಈ ಕುರಿತು ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಮಾತನಾಡಿ,’ಯೂರಿಯಾ ರಸಗೊಬ್ಬರ ಖರೀದಿಗೆ ಮಾತ್ರ ಎಫ್‌ಐಡಿ ಕಡ್ಡಾಯವಾಗಿದ್ದು, ಉಳಿದ ಯಾವುದೇ ರಸಗೊಬ್ಬರಗಳಿಗೆ ಎಫ್‌ಐಡಿ ಅವಶ್ಯಕತೆ ಇಲ್ಲ ಎಂದು ಕೃಷಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

‘ಆದರೆ ತಾಲೂಕಿನ ಕೆಲವು ವ್ಯಾಪಾರಸ್ಥರು ಕಳಪೆ ಬೀಜ ಮತ್ತು ರಸಗೊಬ್ಬರಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಸಾಮಾನ್ಯವಾಗಿದೆ ಎಂದು ಆರೋಪಿಸಿದ್ದಾರೆ. ರೈತರು ಈಗಾಗಲೇ ರಸಗೊಬ್ಬರ ಕೊರತೆಯ ಭೀತಿಯಿಂದ ಗೊಂದಲದಲ್ಲಿರುವ ಸಂದರ್ಭದಲ್ಲೇ, ಕೆಲವು ವ್ಯಾಪಾರಿಗಳು ಅಂಗಡಿಗಳ ಬದಲು ಬೇರೆಡೆ ಗೋದಾಮು, ಶೆಡ್ ಹಾಗೂ ಮನೆಗಳಲ್ಲಿ ಗೊಬ್ಬರ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ’ ಎಂದು ದೂರಿದ್ದಾರೆ.

‘ಈ ಮೂಲಕ ರೈತರಿಗೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸುವ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘ಎಂಆರ್‌ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಸಂಬಂಧಿಸಿದ ಅಂಗಡಿಗಳ ಪರವಾನಗಿಯನ್ನು ರದ್ದುಪಡಿಸಬೇಕು’ ಎಂದು ಸಂಘ ಆಗ್ರಹಿಸಿದೆ.

‘ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದಲ್ಲಿ ಶಹಾಪುರ ಸಹಾಯಕ ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ಉಗ್ರ ಹೋರಾಟ ನಡೆಸಲಾಗುವುದು’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆ ನೀಡಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಎಸ್‌ಟಿ ಜಾತಿ ಪ್ರಮಾಣ ಪತ್ರ ವಿತರಣೆಗೆ ಆಗ್ರಹಿಸಿ ಮನವಿ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ, ತಾಲೂಕ ಅಧ್ಯಕ್ಷ ತಮ್ಮಣ್ಣ ಜಾಗೀರ್ದಾರ್ ಹಾಗೂ ಕಾರ್ಯದರ್ಶಿ ಭೀಮಣ್ಣ ತಪ್ಪಿದಾರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...