ಯಾದಗಿರಿ | ಕೊಲೆಯನ್ನು ಅಪಘಾತವಾಗಿ ಬಿಂಬಿಸಲು ಯತ್ನ; ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Date:

ತಾಲೂಕಿನ ಚಾಮನಳ್ಳಿ ತಾಂಡಾದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಯುವಕನನ್ನು ಕೊಲೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲೆಯಾದ ಯುವಕನ ಪತ್ನಿ ಸೇರಿ ಮೂವರ ವಿರುದ್ಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

- Advertisement -

ಆಟೊ ಚಾಲಕ ಸಾಗರ್ ಬಾಬು ರಾಠೋಡ (28) ಕೊಲೆಯಾದ ವ್ಯಕ್ತಿ. ಕೊಲೆಗೆ ಕುಮ್ಮಕ್ಕು ನೀಡಿದ ಆರೋಪದಡಿ ಪತ್ನಿ ಪೂಜಾ, ಹಾಗೂ ಕೊಲೆಗೈದ ಆರೋಪದಡಿ ರೆಡ್ಡಿ ಬಲರಾಮ ರಾಠೋಡ ಮತ್ತು ಆತನ ಸ್ನೇಹಿತ ಮಹೇಶ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಪೊಲೀಸರ ಪ್ರಕಾರ, ಸಾಗರ್ ಪತ್ನಿ ಪೂಜಾ ಮತ್ತು ರೆಡ್ಡಿ ನಡುವೆ ಕಳೆದ ಮೂರು-ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಈ ವಿಚಾರವಾಗಿ ಸಾಗರ್ ಹಲವು ಬಾರಿ ಎಚ್ಚರಿಕೆ ನೀಡಿದರೂ, ಸಂಬಂಧ ಮುಂದುವರೆದಿದ್ದರಿಂದ ಅವರ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು. ಇದರಿಂದ ದ್ವೇಷ ಬೆಳೆಸಿಕೊಂಡ ರೆಡ್ಡಿ, ತನ್ನ ಸ್ನೇಹಿತ ಮಹೇಶನ ಜೊತೆಗೂಡಿ ಸಾಗರ್ ವಿರುದ್ಧ ಸಂಚು ರೂಪಿಸಿದ್ದಾನೆ ಎನ್ನಲಾಗಿದೆ.

ಭಾನುವಾರ ಸಂಜೆ ಸಾಗರ್, ಮಹೇಶನೊಂದಿಗೆ ಯಾದಗಿರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ರಾತ್ರಿ ವೇಳೆಗೆ ಪತ್ನಿಗೆ ಕರೆ ಮಾಡಿ ತಡವಾಗಿ ಬರುವುದಾಗಿ ತಿಳಿಸಿದ್ದ. ನಂತರ ಅವನ ಮೊಬೈಲ್ ಸ್ವಿಚ್‌ ಆಫ್ ಆಗಿತ್ತು. ಸಂಬಂಧಿಕರು ಮಹೇಶನನ್ನು ಸಂಪರ್ಕಿಸಿದಾಗ, “ಕುಡಿದು ಎಲ್ಲಾದರೂ ಮಲಗಿರಬಹುದು” ಎಂದು ಹೇಳಿ ತಪ್ಪಿಸಿಕೊಂಡಿದ್ದಾನೆ.

ಸೋಮವಾರ ಬೆಳಿಗ್ಗೆ ಹೊಸಳ್ಳಿ (ಎಂ) ರಸ್ತೆ ಬಳಿ ಕೆಇಬಿ ಕಲ್ಯಾಣ ಮಂಟಪದ ಸಮೀಪ ಸಾಗರ್ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಲೆಯ ಮೇಲೆ ಗಂಭೀರ ಗಾಯಗಳು ಕಂಡುಬಂದಿದ್ದು, ಮೂಗಿನಿಂದ ರಕ್ತಸ್ರಾವವಾಗಿತ್ತು.

ತನಿಖೆಯಲ್ಲಿ, ಆರೋಪಿಗಳು ಸಾಗರ್‌ನ್ನು ಬೇರೆಡೆಗೆ ಕರೆದೊಯ್ದು ತಲೆಗೆ ಹೊಡೆದು ಕೊಲೆ ಮಾಡಿ, ನಂತರ ಆಟೊ ಪಲ್ಟಿ ಮಾಡಿ ಅಪಘಾತದಂತೆ ತೋರಿಸಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಪೂಜಾ ಸಹಕಾರ ನೀಡಿದ್ದಾಳೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಪೆಟ್ರೋಲ್, ಡೀಸೆಲ್‌ಗಾಗಿ ಬಂಕ್‌ಗಳ ಮುಂದೆ ಮುಗಿಬಿದ್ದ ವಾಹನ ಸವಾರರು

ಘಟನೆ ಸ್ಥಳಕ್ಕೆ ಎಸ್‌ಪಿ ಪೃಥ್ವಿಕ್ ಶಂಕರ್, ಡಿವೈಎಸ್‌ಪಿ ಸುರೇಶ ನಾಯಕ್, ಸಿಪಿಐ ಸುನೀಲ ಮೂಲಿಮನಿ ಹಾಗೂ ಪಿಎಸ್‌ಐ ನಾಗಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...