ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಗ್ರಾಮದ ಬಾಲಕಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ, ಅಪರಿಚಿತ ಆರೋಪಿಗಳು ಆಕೆಯನ್ನು ಅಡ್ಡಗಟ್ಟಿ ಕೈಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಯಾವುದೋ ವಾಹನದ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಆರೋಪಿಗಳು ಆತಂಕಗೊಂಡು ಬಾಲಕಿಯನ್ನು ಅಲ್ಲಿಯೇ ಬಿಟ್ಟು, ಸಮೀಪದ ಕಾಲುವೆ ಪಕ್ಕಕ್ಕೆ ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ಗ್ರಾಮಸ್ಥರು ಬಾಲಕಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ತಕ್ಷಣ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಜನಗಣತಿ ಕರ್ತವ್ಯಕ್ಕೆ ಗೈರು: ನಿರ್ಲಕ್ಷ್ಯ ತೋರಿದ ಶಿಕ್ಷಕಿನ ಅಮಾನತು
ಘಟನೆಯ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.





