ಯಾದಗಿರಿ | ಕಾನೂನು ಅರಿವು, ನೆರವು ಕುರಿತು ಜಾಗೃತಿ ಕಾರ್ಯಕ್ರಮ

Date:

ಶಹಾಪುರ ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಸೋಮವಾರ ಯಶಸ್ವಿಯಾಗಿ ನೆರವೇರಿತು. ಗ್ರಾಮೀಣ ಜನರಿಗೆ ಕಾನೂನು ಜ್ಞಾನವನ್ನು ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

- Advertisement -

ತಾಲ್ಲೂಕು ವಕೀಲರ ಸಂಘ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಇಲಾಖೆ, ಪಂಚಾಯತ್ ಇಲಾಖೆ ಹಾಗೂ ಕಂದಾಯ ಇಲಾಖೆಗಳ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ವಿವಿಧ ಕಾನೂನುಗಳ ಕುರಿತು ಅರಿವು ಮೂಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾರ್ಯಕ್ರಮದಲ್ಲಿ ಸರ್ಕಾರಿ ಎಪಿಪಿ ಶ್ರೀಮತಿ ವಿದ್ಯಾರಾಣಿ ಹಾಗೂ ಪರ್ವೀನಾ ಮಾತನಾಡಿ, ‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟಲು ಕಾನೂನು ಅರಿವು ಅತ್ಯಗತ್ಯ ಎಂದು ತಿಳಿಸಿದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಅವಮಾನ ಮತ್ತು ಹಿಂಸಾಚಾರಗಳ ವಿರುದ್ಧ ಕಾನೂನು ಕ್ರಮಗಳ ಕುರಿತು’ ವಿವರಿಸಿದರು.

1595011

‘ಪೊಲೀಸ್ ಇಲಾಖೆಯ ಪಿಎಸ್ಐ ಶಾಮುಸುಂದರ್ ನಾಯಕ್ ಗ್ರಾಮದಲ್ಲಿನ ಪ್ರಮುಖ ಬೀದಿಗಳು ಹಾಗೂ ಸರ್ಕಾರಿ ಶಾಲೆಯಲ್ಲಿ ಜಾಗೃತಿ ಮೂಡಿಸಿ, ಜನರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವಂತೆ ಕರೆ ನೀಡಿದರು.

ಇದೆ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಹತ್ತಿಗೂಡೂರ್ ಶರಣರೆಡ್ಡಿ ಮಾತನಾಡಿ, ‘ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವು ಪ್ರತಿ ಗ್ರಾಮಕ್ಕೆ ಮಾತ್ರವಲ್ಲ, ಪ್ರತಿ ಮನೆಗೂ ತಲುಪುವಂತಾಗಬೇಕು. ಆಗ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯ ಸಾಧನೆ ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕ ಅಧ್ಯಕ್ಷ ಮಹೇಶ್ ಸಾಹುಕಾರ್, ಶರಣಪ್ಪ ಚಲವಾದಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನು ಓದಿದ್ದೀರಾ? ಕಲಬುರಗಿ | ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಜಾರಿಗೆ ಒತ್ತಾಯ

ಕಾರ್ಯಕ್ರಮ ಆಯೋಜಕ ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ರೇಣುಕಾ ಬಂಕುರ್, ಗ್ರಾಮದ ಮಹಿಳೆಯರು, ಯುವಕರು ಹಾಗೂ ಯುವತಿಯರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...