ಯಾದಗಿರಿ | ಬಾಂಬ್ ಬೆದರಿಕೆ ಸಂದೇಶ: ಜನಸಂದಣಿ ಸ್ಥಳಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ

Date:

ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ಸೋಮವಾರ ಯಾದಗಿರಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಗಟ್ಟಿಗೊಳಿಸಿ ಪ್ರಮುಖ ಜನಸಂದಣಿ ಸ್ಥಳಗಳಲ್ಲಿ ಕಟ್ಟು ನಿಟ್ಟಿನ ತಪಾಸಣೆ ನಡೆಸಲಾಯಿತು.

- Advertisement -

ಪೊಲೀಸ್ ಇಲಾಖೆ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸಿಬ್ಬಂದಿ ನಗರ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ವ್ಯಾಪಕ ಪರಿಶೀಲನೆ ಕೈಗೊಂಡರು. ವಿಶೇಷವಾಗಿ ಯಾದಗಿರಿ ಬಸ್ ನಿಲ್ದಾಣ, ಯಾದಗಿರಿ ರೈಲ್ವೆ ನಿಲ್ದಾಣ ಹಾಗೂ ಜಿಲ್ಲಾ ನ್ಯಾಯಾಲಯ ಆವರಣ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಶ್ವಾನ ದಳದ ಸಹಾಯದಿಂದ ಪ್ರಯಾಣಿಕರ ಲಗೇಜ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಅನುಮಾನಾಸ್ಪದ ವಸ್ತುಗಳ ಮೇಲೆ ವಿಶೇಷ ಗಮನ ಹರಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಪಾಸಣೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದಲ್ಲದೆ, ಮಂಗಳವಾರ ನಾರಾಯಣಪುರ ಜಲಾಶಯ ಸೇರಿದಂತೆ ಜಿಲ್ಲೆಯ ಇತರೆ ಪ್ರಮುಖ ಸ್ಥಳಗಳಿಗೆ ಬಾಂಬ್ ನಿಷ್ಕ್ರಿಯ ದಳದ ತಂಡ ಭೇಟಿ ನೀಡಿ ಭದ್ರತಾ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ಮೂವರ ಬಂಧನ

ಸಾರ್ವಜನಿಕರು ಆತಂಕಗೊಳ್ಳದೆ, ಅನುಮಾನಾಸ್ಪದ ವಸ್ತುಗಳು ಅಥವಾ ಚಟುವಟಿಕೆಗಳ ಬಗ್ಗೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...