ಯಾದಗಿರಿ | ಪುಸ್ತಕ ನಮ್ಮ ಜ್ಞಾನದ ಬುನಾದಿ, ಅರಿವಿನ ಸಂಕೇತ: ಡಾ. ಮಾನಸ ಅಭಿಮತ

Date:

ಪುಸ್ತಕಗಳು ನಮ್ಮ ಜ್ಞಾನದ ಬುನಾದಿಯಾಗಿದ್ದು, ಅರಿವಿನ ಸಂಕೇತಗಳಾಗಿವೆ. ಗಾಂಧಿ, ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳನ್ನು ಸಮಾಜಕ್ಕೆ ನೀಡಿರುವ ಶಕ್ತಿ ಪುಸ್ತಕಗಳಲ್ಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅಭಿಮತ ಅವರು ಹೇಳಿದರು.

- Advertisement -

ಯಾದಗಿರಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ ಕನ್ನಡ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಕರಪತ್ರ ಬಿಡುಗಡೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಈ ಅಭಿಯಾನವು ಮುಖ್ಯವಾಗಿ ಯುವಜನತೆಗೆ ತಲುಪಬೇಕಾಗಿರುವ ಅಭಿಯಾನವಾಗಿದ್ದು. ಪುಸ್ತಕಗಳು ನಮ್ಮ ಜ್ಞಾನದ ಬುನಾದಿ, ಅರಿವಿನ ಸಂಕೇತವಾಗಿವೆ ಅವುಗಳು ಗಾಂಧಿ, ಕಲಾಂ ನಂತವರನ್ನು ಸಮಾಜಕ್ಕೆ ನೀಡಿವೆ ಅದಕ್ಕಾಗಿ ನಮ್ಮ ಪ್ರಾಧಿಕಾರದಿಂದ ಒಂದು ವಿನೂತನ ಕಾರ್ಯವನ್ನು ಕೈಗೊಂಡಿದ್ದೇವೆ. ಮನೆಗಳನ್ನು ಜ್ಞಾನ ಮಂದಿರಗಳನ್ನಾಗಿ ಪರಿವರ್ತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಲನಚಿತ್ರ ನಟರು, ಜನಪ್ರತಿನಿಧಿಗಳು, ರಾಜಕಾರಣಿಗಳ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಯೋಜನೆ ಇದೆ. ಇದಕ್ಕೆ ಓದುವ ಸಂಸ್ಕೃತಿ ಹೆಚ್ಚಿಸುವ ಕಾರ್ಯ ಹೆಚ್ಚಿಸಬೇಕಿದೆʼ ಎಂದರು.

894251

‘ಗ್ರಂಥಾಲಯಗಳ ಸತತ ಕ್ರಿಯಾಶೀಲತೆಗೆ ಜಿಲ್ಲಾಮಟ್ಟದಲ್ಲಿ ಗ್ರಂಥಾಲಯ ಜಾಗೃತಿ ಸಮಿತಿಗಳನ್ನು ರಚಿಸಲಾಗುವುದು. ಹೊಸ ಗ್ರಂಥಾಲಯಗಳ ಸ್ಥಾಪನೆ, ಹೊಸ ಪುಸ್ತಕಗಳ ಪರಿಚಯ, ಗಣ್ಯರೊಂದಿಗೆ ಸಂವಾದ, ಸ್ಥಳೀಯ ಸಾಹಿತಿಗಳ ಸಾಧನೆಗೆ ಅಭಿನಂದನಾ ಕಾರ್ಯಕ್ರಮಗಳು ಸಮಿತಿಯ ಕರ್ತವ್ಯವಾಗಿರುತ್ತವೆ’ ಎಂದರು.

ಮನೆಗೊಂದು ಗ್ರಂಥಾಲಯ ಜಾಗೃತಿ ಸಮಿತಿಯ ಸಂಚಾಲಕರಾಗಿ ಪ್ರಕಾಶ್ ಅಂಗಡಿ ಅವರನ್ನು ಹಾಗೂ ಸದಸ್ಯರಾಗಿ ಭಾಗ್ಯದೋರೆ, ನೀಲಮ್ಮ ಮಲ್ಲೆ, ದೇವೇಂದ್ರ ಹುಲ್ಕಲ್ (ಜೆ), ಸಂತೋಷ್ ಸತ್ಯಂಪೇಟ್, ಕನಕಪ್ಪ ವಾಗನಣಗೇರಿ, ನೀಲಕಂಠ ಹೊನ್ಕಲ್ ಮತ್ತು ಮಲ್ಲಿಕಾರ್ಜುನ್ ಕೊಠಗೇರಿ ಅವರನ್ನು ನೇಮಿಸಿ ಅರ್ಹತಾ ಪತ್ರಗಳನ್ನು ವಿತರಿಸಲಾಯಿತು.

ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಕಸಾಪ ತಾಲ್ಲೂಕು ಅಧ್ಯಕ್ಷ ಡಾ. ರವೀಂದ್ರನಾಥ ಹೊಸಮನಿ ಹಾಗೂ ಪುಸ್ತಕ ಪ್ರಾಧಿಕಾರದ ಶ್ರೀನಿವಾಸ್ ಕರಿಯಪ್ಪ ವೇದಿಕೆ ಮೇಲೆ ಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ: ಮರ್ಯಾದಾ ಹತ್ಯೆ ತಡೆ ಕಾಯ್ದೆ ತರಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾರ್ಯಕ್ರಮವನ್ನು ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ, ಸಾಹಿತಿ ಡಾ.ಗಾಳೆಪ್ಪ ಪೂಜಾರಿ, ಎಸ್.ಎಸ್. ನಾಯಕ್, ಮಹಾದೇವಪ್ಪಗೌಡ, ಸಿ.ಎಂ.ಪಟ್ಟೇದಾರ್, ಬಸವರಾಜ ಮೊಟನಳ್ಳಿ, ಚನ್ನಪ್ಪಗೌಡ, ದೇವರಾಜ ನಾಯಕ, ದ್ವೀತಿಯ ದರ್ಜೆ ಗುತ್ತಿಗೆದಾರ ಮರಿಲಿಂಗ ಬಂದಳ್ಳಿ, ದೊಡ್ಡಮಾನಪ್ಪ ನಾಟೇಕರ್, ಸಣ್ಣ್ಡಮಾನಪ್ಪ ನಾಟೇಕರ್, ಕು. ಸಂಗೀತ ಹುಲ್ಕಲ್ ಭಾಗವಹಿಸಿದರು.

ಕಾರ್ಯಕ್ರಮವನ್ನು ಡಾ.ಭೀಮರಾಯ ಲಿಂಗೇರಿ ನಿರೂಪಿಸಿದರು, ಪ್ರಕಾಶ ಅಂಗಡಿ ಸ್ವಾಗತಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...