ಯಾದಗಿರಿ | ವೃದ್ಧ ದಂಪತಿಯನ್ನು ಮಧ್ಯದಲ್ಲೇ ಇಳಿಸಿದ ಬಸ್ ನಿರ್ವಾಹಕ ಅಮಾನತು

Date:

ವಡಗೇರಾ ತಾಲ್ಲೂಕಿನಲ್ಲಿ ವೃದ್ಧ ದಂಪತಿಯನ್ನು ದಾರಿಯ ಮಧ್ಯದಲ್ಲೇ ಬಸ್‌ನಿಂದ ಇಳಿಸಿದ ಘಟನೆಗೆ ಸಂಬಂಧಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಕ್ಷಣ ಕ್ರಮ ಕೈಗೊಂಡು ಬಸ್ ನಿರ್ವಾಹಕನನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ.

- Advertisement -

ಫೆಬ್ರವರಿ 9ರಂದು ಕಲಬುರಗಿ ಮೂಲದ ಸಂಗಮೇಶ ಹಾಗೂ ಅನ್ನಪೂರ್ಣ ಎಂಬ ವೃದ್ಧ ದಂಪತಿ ಯಾದಗಿರಿ ಸಂಗಮ ನಾಮಫಲಕ ಹೊಂದಿದ ಬಸ್‌ಗೆ ಹತ್ತಿ ಸಂಗಮ ಗ್ರಾಮಕ್ಕೆ ತೆರಳುತ್ತಿದ್ದರು. ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ ಎಂಬ ನೆಪವೊಡ್ಡಿದ ನಿರ್ವಾಹಕ, ಗಂಡೂರು ಗ್ರಾಮದ ಸಮೀಪ ದಂಪತಿಯನ್ನು ಬಸ್‌ನಿಂದ ಇಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಬಸ್‌ನಿಂದ ಇಳಿಸಲ್ಪಟ್ಟ ವೃದ್ಧ ದಂಪತಿ ಸುಮಾರು 2.5 ಕಿಲೋಮೀಟರ್ ದೂರ ಕಾಲ್ನಡಿಗೆಯಲ್ಲೇ ಸಾಗಿದ್ದು, ಸಂಗಮ ಗ್ರಾಮ ತಲುಪಬೇಕಾದ ಸಂಕಷ್ಟಕರ ಪರಿಸ್ಥಿತಿ ಎದುರಿಸಬೇಕಾಯಿತು. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮಹಾಶಿವರಾತ್ರಿ ಹಿನ್ನೆಲೆ ಕೋಟೆಯಲ್ಲಿ ಪೂಜೆಗೆ ಯತ್ನ, ದಿವ್ಯಾ ಹಾಗರಗಿ ಸೇರಿ ಹಲವರು ಪೊಲೀಸ್ ವಶಕ್ಕೆ

ಪ್ರಕರಣ ಬೆಳಕಿಗೆ ಬಂದ ತಕ್ಷಣ ಕಕರಸಾ ಅಧಿಕಾರಿಗಳು ಪರಿಶೀಲನೆ ನಡೆಸಿ ಸಂಬಂಧಿತ ನಿರ್ವಾಹಕನನ್ನು ಅಮಾನತುಗೊಳಿಸಿದ್ದಾರೆ. ಇಲಾಖಾ ವಿಚಾರಣೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...