ಯಾದಗಿರಿ | ಬಳ್ಳಾರಿ ಕುಡಿತಿನಿಯಲ್ಲಿ ರೈತರ ಬಂಧನ ಖಂಡನೆ: ಕೆಪಿಆರ್‌ಎಸ್ ಆಕ್ರೋಶ

Date:

ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿದಂತೆ ನೂರಾರು ರೈತರ ಬಂಧನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ತೀವ್ರವಾಗಿ ಖಂಡಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಶವಂತ ಟಿ ತಿಳಿಸಿದ್ದಾರೆ.

- Advertisement -

ಶಹಾಪುರದಲ್ಲಿ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಅರ್ಸೆಲರ್ ಮಿತ್ತಲ್ ಕಂಪನಿಗಾಗಿ 2012ರಲ್ಲಿ ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನುಗಳನ್ನು ಅಕ್ರಮವಾಗಿ ಜಿಂದಾಲ್ ಕಂಪನಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕೆಪಿಆರ್‌ಎಸ್ ರಾಜ್ಯಾಧ್ಯಕ್ಷ ಯು. ಬಸವರಾಜ್, ಸಿಐಟಿಯು ರಾಜ್ಯ ಉಪಾಧ್ಯಕ್ಷ ಜಿ. ಸತ್ಯಬಾಬು ಸೇರಿದಂತೆ ನೂರಾರು ರೈತರನ್ನು ಬಂಧಿಸಿರುವುದು ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಎಕರೆಗೆ ₹1.5 ಕೋಟಿಗೂ ಹೆಚ್ಚು ಮೌಲ್ಯದ ಭೂಮಿಯನ್ನು ಕೇವಲ ₹28 ಲಕ್ಷಕ್ಕೆ ಮಾರಾಟ ಮಾಡಿರುವುದು ಭ್ರಷ್ಟಾಚಾರದ ಸ್ಪಷ್ಟ ಉದಾಹರಣೆ ಎಂದು ಅವರು ಆರೋಪಿಸಿದರು.

ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಿದ್ದರೂ, ಏಪ್ರಿಲ್ 27ರಿಂದ ಮೇ 7ರವರೆಗೆ ಬಳ್ಳಾರಿ ಉಪವಿಭಾಗಾಧಿಕಾರಿಗಳು ಬಿಎನ್‌ಎಸ್ 2023ರ ಕಲಂ 163ರಡಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಕೆಪಿಆರ್‌ಎಸ್ ದಮನಕಾರಿ ಕ್ರಮವೆಂದು ಟೀಕಿಸಿದೆ.

ರಾಜ್ಯ ಸರ್ಕಾರ ಜಿಂದಾಲ್ ಕಂಪನಿಯೊಂದಿಗೆ ಮಾಡಿಕೊಂಡಿರುವ ಕಾನೂನುಬಾಹಿರ ಭೂಮಿಯ ಮಾರಾಟವನ್ನು ತಕ್ಷಣ ರದ್ದುಪಡಿಸಿ, ಸುಪ್ರೀಂ ಕೋರ್ಟ್ ತೀರ್ಪಿನಂತೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಅಥವಾ ಭೂಮಿಯನ್ನು ಹಿಂದಿರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಬಂಧಿತ ರೈತ ಮುಖಂಡರು ಹಾಗೂ ರೈತರನ್ನು ಬೇಷರತ್ತಾಗಿ ಬಿಡುಗಡೆಗೊಳಿಸಿ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ತಕ್ಷಣ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿರುವ ಕೆಪಿಆರ್‌ಎಸ್, ರೈತರ ಹೋರಾಟವನ್ನು ಪೊಲೀಸ್ ಬಲದಿಂದ ದಮನಿಸುವ ಪ್ರಯತ್ನ ಮುಂದುವರಿದರೆ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಮಾರಣಾಂತಿಕ ಹಲ್ಲೆ

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಾಂತರಾಮ ನಾಯಕ, ಚನ್ನಪ್ಪ ಆನೆಗುಂದಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...