ಯಾದಗಿರಿ | ಜಯಾ ವೈನ್ಸ್ ಪರವಾನಗಿ ರದ್ದುಪಡಿಸಲು ಆಗ್ರಹ ದಲಿತ ಸೇನೆ ಧರಣಿ

Date:

ದೋರನಹಳ್ಳಿ ಗ್ರಾಮದ ಜಯಾ ವೈನ್ಸ್ ಮದ್ಯದ ಅಂಗಡಿ ಅಬಕಾರಿ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ, ಅದರ ಪರವಾನಗಿಯನ್ನು ತಕ್ಷಣವೇ ರದ್ದುಪಡಿಸುವಂತೆ ಆಗ್ರಹಿಸಿ ದಲಿತ ಸೇನೆ ಶಹಾಪುರ ತಾಲೂಕು ಸಮಿತಿ ವತಿಯಿಂದ ಗುರುವಾರ ಶಹಾಪುರ ಅಬಕಾರಿ ಉಪ ಅಧೀಕ್ಷಕರ ಕಚೇರಿ ಎದುರು ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಯಿತು.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಸೇನೆಯ ತಾಲೂಕು ಉಪಾಧ್ಯಕ್ಷ ಅಶೋಕ ಪೂಜಾರಿ, “ಅಬಕಾರಿ ಕಾಯ್ದೆಯ ನಿಯಮ 11ರ ಪ್ರಕಾರ ಬೆಳಿಗ್ಗೆ 9 ಗಂಟೆಯ ಮೊದಲು ಮದ್ಯದ ಅಂಗಡಿ ತೆರೆಯಲು ಅವಕಾಶವಿಲ್ಲ. ಆದರೆ ದೋರನಹಳ್ಳಿಯ ಜಯಾ ವೈನ್ಸ್‌ನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಾಟ ನಡೆಯುತ್ತಿದೆ. ಇದರಿಂದ ಗ್ರಾಮದ ಯುವಕರು ಕೆಲಸಕ್ಕೆ ಹೋಗುವ ಬದಲು ಮದ್ಯದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಹಳ್ಳಿಯ ಯುವಶಕ್ತಿ ಹಾಳಾಗುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಿಎಲ್-2 ಪರವಾನಗಿ ಹೊಂದಿರುವ ಅಂಗಡಿಯಲ್ಲಿ ಕೇವಲ ಪಾರ್ಸೆಲ್ ಮೂಲಕ ಮದ್ಯ ವಿತರಣೆ ಮಾಡಬೇಕಾದರೂ, ಅಂಗಡಿಯ ಹಿಂಭಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ಕುಳಿತು ಮದ್ಯ ಸೇವನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಆರೋಪಿಸಿದರು. ಅಲ್ಲದೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಪ್ರತಿ ಬಾಟಲಿಗೆ ₹20 ರಿಂದ ₹30 ಹೆಚ್ಚುವರಿಯಾಗಿ ವಸೂಲಿ ಮಾಡಲಾಗುತ್ತಿದೆ. “ಬಡ ಜನರ ದುಡಿಮೆ ಹಣವನ್ನು ಹಗಲು ದರೋಡೆ ಮಾಡುವಂತೆ ಕಸಿದುಕೊಳ್ಳಲಾಗುತ್ತಿದೆ. ಈ ಎಲ್ಲ ಅಕ್ರಮಗಳ ನಡುವೆಯೂ ಅಬಕಾರಿ ಇಲಾಖೆ ಕಣ್ಣುಮುಚ್ಚಿ ಕುಳಿತಿರುವುದು ವಿಷಾದನೀಯ,” ಎಂದು ಟೀಕಿಸಿದರು.

ಜಿಲ್ಲಾ ಅಧ್ಯಕ್ಷ ಅಶೋಕ ಹೊಸಮನಿ ಮಾತನಾಡಿ, “ಅಬಕಾರಿ ನಿಯಮ ಉಲ್ಲಂಘಿಸುತ್ತಿರುವ ಜಯಾ ವೈನ್ಸ್‌ನ ಪರವಾನಗಿಯನ್ನು ತಕ್ಷಣವೇ ರದ್ದುಪಡಿಸಬೇಕು. ನಾಲ್ಕು ತಿಂಗಳಿನಿಂದ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿರುವ ಶಹಾಪುರ ವಲಯದ ಅಬಕಾರಿ ನಿರೀಕ್ಷಕರನ್ನು ಅಮಾನತುಗೊಳಿಸಬೇಕು. ಇಲ್ಲವಾದರೆ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.

ಬೇಡಿಕೆಗಳನ್ನು ಆಲಿಸಿದ ಉಪ ವಿಭಾಗದ ಅಬಕಾರಿ ನಿರೀಕ್ಷಕ ಜೆಟ್ಟೆಪ್ಪ ಬಿ. ಬೇಲೂರು ಮಾತನಾಡಿ, “ಸದರಿ ಮದ್ಯದ ಅಂಗಡಿಯ ವಿರುದ್ಧ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಅಬಕಾರಿ ನಿಯಮ 29ರ ಅನ್ವಯ ಪರವಾನಗಿ ರದ್ದುಪಡಿಸಲು ಮೇಲಾಧಿಕಾರಿಗಳಿಗೆ ಶಿಫಾರಸು ಕಳುಹಿಸಲಾಗಿದೆ. ಮುಂದಿನ 10 ದಿನಗಳೊಳಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ,” ಎಂದು ತಿಳಿಸಿದರು.

ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ದಲಿತ ಸೇನೆ ಶಹಾಪುರ ತಾಲೂಕು ಅಧ್ಯಕ್ಷ ಹುಸೇನಪ್ಪ ದೊಡ್ಮನಿ ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಮಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಗತ್ಯ: ಚೇತನ ಅಹಿಂಸ

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಲಿಂಗ ಗುಡಿಮನಿ, ಸುರಪುರ ತಾಲೂಕು ಅಧ್ಯಕ್ಷ ಮಹಾದೇವ ದೇವಪುರ, ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಮನೋಜ್ ಕುರುಕುಂದಾ, ವಡಗೇರ ತಾಲೂಕು ಅಧ್ಯಕ್ಷ ಅಯ್ಯಪ್ಪ ಗೊಂದೆನೂರ, ಹುಣಸಗಿ ತಾಲೂಕು ಅಧ್ಯಕ್ಷ ನಿಂಗಣ್ಣ ಹೊಸಮನಿ ಸೇರಿದಂತೆ ಪುರುಷೋತ್ತಮ್ ಬಬಲಾದಿ, ವಿಠ್ಠಲ್ ಕೆಂಭಾವಿ, ವಿಜಯ್ ಹೊಸಮನಿ, ಬಸ್ಸು ಪರಸಪೂರ, ಗೂಳಪ್ಪ ಟಿ. ವಡಗೇರಾ, ರವಿಕುಮಾರ ಕಟ್ಟಿಮನಿ, ಖಂಡಪ್ಪ ಹಯ್ಯಾಳ, ಲೋಕೇಶ್ ವಸ್ತಾರಿ ಹಾಗೂ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...