ಯಾದಗಿರಿ | ಮರ್ಯಾದೆ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ದಸಂಸ ಪ್ರತಿಭಟನೆ

Date:

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಡಗೇರಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಬಂಧಿತ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಡಗೇರಾ ತಾಲೂಕು ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ತಹಸೀಲ್ದಾರರ ಮುಖಾಂತರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಮಾತನಾಡಿ, ‘ದಲಿತ ಯುವಕ ವಿವೇಕಾನಂದನೊಂದಿಗೆ ಪ್ರೀತಿಸಿ ಮದುವೆಯಾದ ಕಾರಣಕ್ಕೆ ದ್ವೇಷ ಸಾಧಿಸಿ, ಏಳು ತಿಂಗಳ ಗರ್ಭಿಣಿ ಮಾನ್ಯಳನ್ನು ಮರ್ಯಾದೆ ಹೆಸರಿನಲ್ಲಿ ಕೊಲೆ ಮಾಡಿರುವುದು ಅಮಾನವೀಯ ಹಾಗೂ ಮಾನವೀಯತೆಯನ್ನು ಪ್ರಶ್ನಿಸುವ ಕ್ರೂರ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣನ ನಾಡಿನಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ಖಂಡನೀಯ’ ಎಂದರು.

‘ಪ್ರಕರಣಕ್ಕೆ ಕಾರಣಕರ್ತರಾದ ಪ್ರಕಾಶಗೌಡ ಪಾಟೀಲ್, ಪ್ರೀತಮಗೌಡ ಪಾಟೀಲ್, ಅರುಣಗೌಡ ಪಾಟೀಲ್, ಈರಪ್ಪ ಹಾಗೂ ಮುದಕಪ್ಪ ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ರಾಜ್ಯದಲ್ಲಿ ಮರ್ಯಾದೆ ಹತ್ಯೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೊಳಿಸಿ, ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು’ ಅವರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಗ್ರಾಮ ಒನ್ ಕೇಂದ್ರದಲ್ಲಿ ಅಕ್ರಮ ಹಣ ವಸೂಲಿ ಆರೋಪ; ತಹಶೀಲ್ದಾರರಿಗೆ ಗ್ರಾಮಸ್ಥರು ಮನವಿ

ಇದೇ ವೇಳೆ ದಲಿತ ಯುವಕ ವಿವೇಕಾನಂದನ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರ, ಸರ್ಕಾರಿ ನೌಕರಿ ಹಾಗೂ 4 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಕುಟುಂಬದ ಆತ್ಮರಕ್ಷಣೆಗೆ ಪಿಸ್ತೂಲು ಪರವಾನಿಗೆ ನೀಡಿ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಮರೆಪ್ಪ ಕ್ರಾಂತಿ, ಬಲಭೀಮ ಬೇವಿನಹಳ್ಳಿ, ವಡಗೇರಾ ತಾಲೂಕು ಸಂಚಾಲಕ ಭೀಮಶಂಕರ ಗುಂಡಹಳ್ಳಿ ಸೇರಿದಂತೆ ಹಲವಾರು ಸಂಘಟನಾ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...