ಯಾದಗಿರಿ | ರಸಗೊಬ್ಬರ ಕಾಳಸಂತೆ ವಿರುದ್ಧ ಕ್ರಮಕ್ಕೆ ಆಗ್ರಹ; ಜೂನ್ 8ರಂದು ಬೃಹತ್ ಪ್ರತಿಭಟನೆ ಕರೆ

Date:

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಬೇಕು ಹಾಗೂ ಎಂಆರ್‌ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಯಾದಗಿರಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಶಹಾಪುರ ತಾಲೂಕಿನ ಎಪಿಎಂಸಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ, ‘ಕೃಷಿ ಇಲಾಖೆ ಅಧಿಕಾರಿಗಳು ಯೂರಿಯಾ ರಸಗೊಬ್ಬರ ಖರೀದಿಗೆ ಮಾತ್ರ ಎಫ್‌ಐಡಿ ಕಡ್ಡಾಯವಾಗಿದ್ದು, ಇತರೆ ರಸಗೊಬ್ಬರಗಳನ್ನು ಎಫ್‌ಐಡಿ ಇಲ್ಲದೇ ಖರೀದಿಸಬಹುದೆಂದು ಸ್ಪಷ್ಟಪಡಿಸಿದ್ದರೂ ಕೆಲವು ವ್ಯಾಪಾರಿಗಳು ರೈತರಿಗೆ ತಪ್ಪು ಮಾಹಿತಿ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‘ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಹೆಚ್ಚಾಗಿದ್ದು, ಕೆಲವು ವ್ಯಾಪಾರಿಗಳು ಅಂಗಡಿಗಳಲ್ಲಿ ಸ್ಟಾಕ್ ಇಲ್ಲವೆಂದು ಹೇಳಿ ಬೇರೆಡೆ ಸಂಗ್ರಹಿಸಿ ಕೃತಕ ಕೊರತೆ ನಿರ್ಮಿಸುತ್ತಿದ್ದಾರೆ. ಈ ಮೂಲಕ ರೈತರಿಗೆ ದುಬಾರಿ ದರದಲ್ಲಿ ಮಾರಾಟ ನಡೆಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ’ ಎಂದು ಮುಖಂಡರು ಹೇಳಿದರು.

‘ಬಿತ್ತನೆ ಕಾರ್ಯ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ರೀತಿಯ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ಅಗತ್ಯ ಪ್ರಮಾಣದ ಬೀಜ ಮತ್ತು ರಸಗೊಬ್ಬರಗಳ ಲಭ್ಯತೆ ಖಚಿತಪಡಿಸಬೇಕು. ಎಂಆರ್‌ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ತಪ್ಪಿತಸ್ಥರ ಪರವಾನಗಿಗಳನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

ರೈತರ ಸಮಸ್ಯೆಗಳ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ಮುಂದುವರಿಸಿದರೆ ಜೂನ್ 8ರಂದು ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆ ನೀಡಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಡಿಎಪಿ ರಸಗೊಬ್ಬರ ಕಾಳಸಂತೆ ಆರೋಪ: ಅಕ್ರಮ ಮಾರಾಟ ತಡೆಗೆ ಬಿಎಸ್‌ಪಿ ಆಗ್ರಹ

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ನರಸಣ್ಣ ನಾಯಕ್, ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಎಸ್.ಎಂ. ಸಾಗರ್, ಮಲ್ಲನಗೌಡ ಮಾಲಿಪಾಟೀಲ್, ತಮ್ಮಣ್ಣ ಜಾಗೀರ್ದಾರ್, ಮರಿಯಪ್ಪ ಹಾಲಗೇರಿ, ಭಾಗಣ್ಣ ರಸ್ತಾಪುರ, ರಾಮಣ್ಣ ದೊರೆ ಶಾರದಹಳ್ಳಿ, ಬೀರಪ್ಪ ಕುರುಕುಂದಿ, ಭೀಮಣ್ಣ ಸಾಹುಕಾರ ಕುರುಕುಂದಿ, ಹಣಮಂತ ಕುರುಕುಂದಿ, ದೇವು ವಟ್ಪೇಟ್, ಭೀಮಣ್ಣ ರಸ್ತಾಪುರ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...