ಯಾದಗಿರಿ | ಸಚಿವ ಸಂತೋಷ್ ಎಸ್ ಲಾಡ್ 52ನೇ ಜನ್ಮದಿನದ ಅಂಗವಾಗಿ 200 ಕಿಟ್‌ಗಳ ವಿತರಣೆ

Date:

ಕಾರ್ಮಿಕ ಸಚಿವರು ಹಾಗೂ ಧಾರವಾಡ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಅವರ 52ನೇ ಜನ್ಮದಿನದ ಅಂಗವಾಗಿ ಬಡ ರೋಗಿಗಳು ಮತ್ತು ಆಟೋ ಚಾಲಕರಿಗೆ 200 ದಿನನಿತ್ಯ ಬಳಕೆಯ ಹಾಗೂ ಆರೋಗ್ಯ ಸಂಬಂಧಿತ ಕಿಟ್‌ಗಳನ್ನು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಯಾದಗಿರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಾಗೂ ಆಟೋ ಚಾಲಕರಿಗೆ ಶುಕ್ರವಾರ ಸಂಜೀವಿನಿ ಜೀವರಕ್ಷಕ ಟ್ರಸ್ಟ್ ವತಿಯಿಂದ 100 ಕಿಟ್‌ಗಳನ್ನು ಹಾಗೂ ಸಂತೋಷ್ ಎಸ್. ಲಾಡ್ ಅಭಿಮಾನಿ ಬಳಗ, ಯಾದಗಿರಿ ವತಿಯಿಂದ 100 ಕಿಟ್‌ಗಳನ್ನು ಒಟ್ಟು 200 ಕಿಟ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1517862

ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನರೆಡ್ಡಿ ಪಾಟೀಲ್ ತುನ್ನೂರ ಅವರ ಸುಪುತ್ರ ಸನ್ನಿ ಗೌಡ (ಪಂಪಣ್ಣಗೌಡ) ತುನ್ನೂರ ಫಲಾನುಭವಿಗಳಿಗೆ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ‘ಸಚಿವ ಸಂತೋಷ್ ಲಾಡ್ ಅವರು ಸದಾ ಕಾರ್ಮಿಕರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡುತ್ತಿದ್ದು, ಅವರ ಜನ್ಮದಿನವನ್ನು ಸೇವಾ ಕಾರ್ಯಗಳ ಮೂಲಕ ಆಚರಿಸುವುದು ಸಂತೋಷದ ವಿಚಾರ’ ಎಂದು ಹೇಳಿದರು.

1517856

ಇದೇ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಆಟೋ ರಿಕ್ಷಾ ಕಾರ್ಮಿಕರಿಗೆ ಕಾಂಗ್ರೆಸ್ ಯುವ ಮುಖಂಡ ಮಲಿಕ್ ಬೀರನೊರ ಕಿಟ್‌ಗಳನ್ನು ವಿತರಿಸಿ, ಕಾರ್ಮಿಕರ ಬದುಕಿಗೆ ನೆರವಾಗುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಬಾಲಕಿ ಜೊತೆ ಅನುಚಿತ ವರ್ತನೆ ಆರೋಪ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ದಾಖಲು

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಸಿದ್ದುಪ್ರಕಾಶ್ ರೆಡ್ಡಿ, ಕೆಪಿಸಿಸಿ ಪದವೀಧರ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಕಿರದಹಳ್ಳಿ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಹೊನ್ನೇಶ ದೊಡ್ಡಮನಿ, ಕೆಪಿಸಿಸಿ ಪದವೀಧರ ಜಿಲ್ಲಾ ಉಪಾಧ್ಯಕ್ಷ ಮರಿಲಿಂಗ ಸಾವೂರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...