ಯಾದಗಿರಿ | ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕತ್ತೆಗಳ ಮೆರವಣಿಗೆ

Date:

ಯಾದಗಿರಿ ನಗರದೊಳಗೆ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಸುಭಾಷ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

- Advertisement -

ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಿಂದ ಡಿಡಿಪಿಐ ಕಚೇರಿವರೆಗೆ ಕತ್ತೆಗಳ ಮೆರವಣಿಗೆ ನಡೆಸಿ, ಶಿಕ್ಷಣ ಇಲಾಖೆಯ ವಿಳಂಬ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ. ಜಿಲ್ಲಾಧ್ಯಕ್ಷ ವಿಶ್ವಾರಾಧ್ಯ ದಿಮ್ಮೆ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಕತ್ತೆಗಳೊಂದಿಗೆ ಡಿಡಿಪಿಐ ಕಚೇರಿಗೆ ತೆರಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವೇಳೆ ಮಾತನಾಡಿದ ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಖಾಪುರ ಅವರು, ಅಕ್ರಮ ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಈಗಾಗಲೇ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಹಾಗೂ ಶಹಾಪೂರದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದರೂ ಶಿಕ್ಷಣ ಇಲಾಖೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದೇ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಇಲಾಖೆಯ ಗಮನ ಸೆಳೆಯುವ ಉದ್ದೇಶದಿಂದಲೇ ಕತ್ತೆಗಳ ಮೆರವಣಿಗೆಯಂತಹ ವಿನೂತನ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮರ್ಯಾದೆ ಹತ್ಯೆ ಖಂಡಿಸಿ ದಸಂಸ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿಡಿಪಿಐ ಅವರು, ಜನವರಿ 2ರ ನಂತರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪ್ರತಿಭಟನೆಯನ್ನು ಹಿಂಪಡೆದರು.

ಈ ಪ್ರತಿಭಟನೆಯಲ್ಲಿ ಭೀಮು ಪೂಜಾರಿ, ಅಬ್ದುಲ್ ಸಾಹುಕಾರ್, ಅಬ್ದುಲ್ ಅಜೀಜ್, ಮಲ್ಲಿಕಾರ್ಜುನ ಸಾಂಗ್ಲಿಯಾನಾ, ಮಹೇಶ್, ನರೇಂದ್ರ ಸೂರ್ಯವಂಶಿ, ಶರಣಪ್ಪ ಕುಂಬಾರ, ಶ್ರೀದೇವಿ ಕಟ್ಟಿಮನಿ, ನಾಗರಡ್ಡಿ ಗೌಡ, ಅಂಬ್ರೇಶ್, ರಾಜು ಗುಂಡಗುರ್ತಿ, ಶರಣು ದೇವರಮನಿ,ಸಿದ್ದು ಪಟ್ಟೇದಾರ, ಮಲ್ಲು ಕಲ್ಮನಿ, ಭೀಮಣ್ಣಗೌಡ, ನಿತೇಶ್ ಕುರಕುಂದಿ, ಅವಿನಾಶ ಇಟೆಕ, ಗುರು ಅಂಗಡಿ, ವಿಶ್ವಜಿತ್ ಕಟ್ಟಿ, ಮಹೇಬೂಬ, ರಮೇಶ್, ಮೈಬುಬ್ ಮೋಟ್ನಳ್ಳಿ, ಅರ್ಜುನ ರಾಠೋಡ, ರಡ್ಡೆಪ್ಪ ಆಸಕ್ತಿ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...