ಯಾದಗಿರಿ | ಪದವಿ ಪೂರ್ವ ಉಪನ್ಯಾಸಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಡಾ. ರವೀಂದ್ರನಾಥ ಹೊಸಮನಿ ಅವಿರೋಧ ಆಯ್ಕೆ

Date:

ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಂಘದ 2026-31ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಒಂಬತ್ತು ಹುದ್ದೆಗಳಿಗೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಲ್ಲಯ್ಯ ಸ್ವಾಮಿ ಮಠಪತಿ ತಿಳಿಸಿದ್ದಾರೆ.

- Advertisement -

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಹುದ್ದೆಗಳಿಗೆ ಒಟ್ಟು ಒಂಬತ್ತು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ನಿಗದಿತ ಅವಧಿಯಲ್ಲಿ ಹೆಚ್ಚಿನ ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾದವರಾಗಿ ಘೋಷಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಚುನಾವಣೆಯಲ್ಲಿ ಡಾ. ರವೀಂದ್ರನಾಥ ಹೊಸಮನಿ ಜಿಲ್ಲಾಧ್ಯಕ್ಷರಾಗಿ, ಸುದರ್ಶನರೆಡ್ಡಿ ಕಾರ್ಯಾಧ್ಯಕ್ಷರಾಗಿ, ನಿರ್ಮಲಾ ಸಿನ್ನೂರ್ ಉಪಾಧ್ಯಕ್ಷರಾಗಿ, ರವೀಂದ್ರ ಎನ್. ಗುತ್ತೇದಾರ ಖಜಾಂಚಿಯಾಗಿ, ಅಮರೇಶ ಭಂಗೂರ ಪ್ರಧಾನ ಕಾರ್ಯದರ್ಶಿಯಾಗಿ, ರುದ್ರಗೌಡ ಬಿರಾದಾರ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ, ಚಂದ್ರಶೇಖರ ಡೊಣ್ಣೆಗೌಡ ಕಾರ್ಯದರ್ಶಿಯಾಗಿ, ಮರೆಪ್ಪ ನಾಯ್ಯೋಡಿ ಜಂಟಿ ಕಾರ್ಯದರ್ಶಿಯಾಗಿ ಹಾಗೂ ಸೋಫಿಸಾಬ್ ಗುತ್ತೇದಾರ ಸಂಚಾಲಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ವಿವಾದಾತ್ಮಕ ಹೇಳಿಕೆ; ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಉಪನ್ಯಾಸಕರ ಸಂಘದ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ್ ಕಲಾಲ್ ಹಾಗೂ ಉಪನ್ಯಾಸಕ ಸಿದ್ರಾಮಪ್ಪ ಅನ್ವಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಮೀನು ವಿವಾದ: ಜೋಳದ ಬೆಳೆ ನಾಶ, ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ

ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳಪುರ ಗ್ರಾಮದಲ್ಲಿ ಬಾಂಡ್ ಪತ್ರದ ಮೂಲಕ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...