ಯಾದಗಿರಿ | ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ: ಅಯ್ಯಣ್ಣ ಹಾಲಬಾವಿ

Date:

ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ನುಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿಯಿಂದ ಸುರಪುರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಎಪಿಎಂಸಿಯ ಶ್ರಮಿಕರ ಭವನದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸುರಪುರ ತಾಲೂಕು ಅಧ್ಯಕ್ಷ ಹಣಮಂತರಾಯ ಮಡಿವಾಳರ ಮಾತನಾಡಿ, “ದೇಶದ ಮಾಜಿ ಪ್ರಧಾನಿಗಳಾಗಿರುವ ಚೌದ್ರಿ ಚರಣಸಿಂಗ್‌ ಅವರು ಹುತಾತ್ಮರಾದ ದಿನದ ಅಂಗವಾಗಿ ರೈತ ದಿನಾಚರಣೆ ಮಾಡಲಾಗುತ್ತದೆ. ಆದರೆ ಇದನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೀರಶೈವ ಲಿಂಗಾಯತ ಸಮಾಜ ಒಡೆಯಲು ಬಿಡುವುದಿಲ್ಲ: ಶಾಮನೂರು ಶಿವಶಂಕರಪ್ಪ

ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಗೌರವ ಅಧ್ಯಕ್ಷ ಸಾಹೇಬಗೌಡ ಮದಲಿಂಗನಾಳ, ಉಪಾಧ್ಯಕ್ಷ ಗದ್ದೆಪ್ಪ ನಾಗಬೇವಿನಾಳ, ಸುರಪುರ ತಾಲೂಕಿನ ಪ್ರಧಾನ ಕಾರ್ಯದರ್ಶಿ ವೆಂಕಟೇಶಗೌಡ ಕುಪಗಲ್, ಖಜಾಂಚಿ ರಾಘು ಕುಪಗಲ್, ಗೌರವ ಅಧ್ಯಕ್ಷ ಮಲ್ಲಣ್ಣ ಹಾಲಬಾವಿ, ಸಹಕಾರ್ಯದರ್ಶಿ ಭೀಮಣ್ಣ ತಿಪ್ಪನಟಗಿ, ಶಿವನಗೌಡ ರುಕ್ಖಾಪೂರ, ಮಾನಪ್ಪ ಕೊಂಬಿನ್ ರುಕ್ಖಾಪೂರ, ಯಂಕಪ್ಪ ದಾಸರ ರುಕ್ಕಾಪೂರ ಸೇರಿದಂತೆ ಬಹುತೇಕ ರೈತ ಮುಖಂಡರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...