ಯಾದಗಿರಿ | ರಸಗೊಬ್ಬರ, ಯೂರಿಯಾ ಕೊರತೆಗೆ ಎತ್ತಿನ ಬಂಡಿ ಸಮೇತ ಡಿಸಿ ಕಚೇರಿ ಎದುರುಗಡೆ ರೈತರ ಪ್ರತಿಭಟನೆ

Date:

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ನಡುವೆಯೇ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬೀಜ, ರಸಗೊಬ್ಬರ, ಯೂರಿಯಾ ಹಾಗೂ ಡಿಎಪಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಎತ್ತಿನ ಬಂಡಿ ಸಮೇತ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟ, ‘ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದ ರಸಗೊಬ್ಬರ ಸಂಗ್ರಹವಿದ್ದರೂ ಕೃಷಿ ಇಲಾಖೆಯ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ನೀತಿಗಳಿಂದ ರೈತರಿಗೆ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

‘ಈ ವರ್ಷ ಉತ್ತಮ ಮುಂಗಾರು ಆರಂಭವಾಗಿದ್ದು, ರೈತರು ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬೀಜ ಮತ್ತು ರಸಗೊಬ್ಬರಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಇಲಾಖೆ ‘ಸೇಲ್ ಸ್ಟಾಪ್’ ಆದೇಶ ಜಾರಿಗೊಳಿಸಿರುವ ಪರಿಣಾಮ ರೈತರಿಗೆ ಗೊಬ್ಬರ ಖರೀದಿಸಲು ತೊಂದರೆ ಉಂಟಾಗಿದೆ’ ಎಂದು ಅವರು ದೂರಿದರು.

1995922

‘ರಸಗೊಬ್ಬರ ವ್ಯಾಪಾರಿಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ₹1,450 ಬೆಲೆಯ ಡಿಎಪಿ ಗೊಬ್ಬರವನ್ನು ₹2,070ಕ್ಕೆ ಮಾರಾಟ ಮಾಡಲಾಗುತ್ತಿದ್ದು, ₹266 ಬೆಲೆಯ ಯೂರಿಯಾವನ್ನು ₹500ಕ್ಕೆ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

‘ರೈತರಿಗೆ ಪ್ರತಿ ಎಕರೆಗೆ ಅಗತ್ಯವಿರುವ ಪ್ರಮಾಣದಲ್ಲಿ ರಸಗೊಬ್ಬರ ವಿತರಿಸಬೇಕು, ತಿಂಗಳಿಗೆ ಒಂದು ಚೀಲದಂತೆ ಮೂರು ತಿಂಗಳು ವಿತರಿಸುವ ಅವೈಜ್ಞಾನಿಕ ನಿಯಮವನ್ನು ತಕ್ಷಣ ರದ್ದುಪಡಿಸಬೇಕು, ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ಪರವಾನಗಿ ರದ್ದುಪಡಿಸಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಇದಲ್ಲದೆ, ‘ನಕಲಿ ಬೀಜ, ನಕಲಿ ರಸಗೊಬ್ಬರ ಹಾಗೂ ನಕಲಿ ಕ್ರಿಮಿನಾಶಕ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲೆಯ ಟಿಎಪಿಎಂಸಿ ಹಾಗೂ ವಿವಿಧ ಗೋದಾಮುಗಳಲ್ಲಿ ಸಂಗ್ರಹವಾಗಿರುವ ಯೂರಿಯಾ, ಡಿಎಪಿ ಹಾಗೂ 20:20:0:13 ಸೇರಿದಂತೆ ವಿವಿಧ ರಸಗೊಬ್ಬರಗಳನ್ನು ತಕ್ಷಣ ರೈತರಿಗೆ ವಿತರಿಸಬೇಕು’ ಎಂದು ಒತ್ತಾಯಿಸಿದರು.

ಬೇಡಿಕೆಗಳು ಈಡೇರುವವರೆಗೆ ಹೋರಾಟ ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು. ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು ರೈತರ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸುವ ಕುರಿತು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಬಟ್ಟೆ ತೊಳೆಯಲು ಹೋದ ಮೂವರು ನೀರಿನಲ್ಲಿ ಮುಳುಗಿ ಸಾವು

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು, ಕಾರ್ಯಕರ್ತರು, ಬಡಗಲಪುರ ನಾಗೇಂದ್ರ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...