ಯಾದಗಿರಿ | ಕೃಷಿ ಹೊಂಡದಲ್ಲಿ ಮುಳುಗಿ ನಾಲ್ಕು ಮಕ್ಕಳ ದುರ್ಮರಣ

Date:

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ನಾಲ್ಕು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.

- Advertisement -

ಮೃತರನ್ನು ಬಸಮ್ಮ(11), ಕಿರಣ್(6), ಶರತ್(6) ಹಾಗೂ ಹಣಮೇಶ್(7) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಧ್ಯಾಹ್ನದ ಸಮಯದಲ್ಲಿ ಆಟವಾಡುತ್ತಿದ್ದ ಮಕ್ಕಳು ಗ್ರಾಮದ ಸಮೀಪದ ಕೃಷಿ ಹೊಂಡದ ಬಳಿ ತೆರಳಿದ್ದರು. ಈ ವೇಳೆ ಈಜಲು ನೀರಿಗೆ ಇಳಿದ ಅವರು, ಆಕಸ್ಮಿಕವಾಗಿ ಹೊಂಡದ ಆಳವಾದ ಭಾಗಕ್ಕೆ ಸಿಲುಕಿದ ಪರಿಣಾಮ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಕ್ಕಳು ನೀರಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಅವರನ್ನು ಹೊರತೆಗೆದರೂ ಕೂಡ ಅಷ್ಟರಲ್ಲಾಗಲೇ ಮಕ್ಕಳು ಮೃತಪಟ್ಟಿರುವುದು ದೃಢಪಟ್ಟಿದ್ದಾಗಿ ಮೂಲಗಳು ತಿಳಿಸಿವೆ.

ಸುದ್ದಿ ತಿಳಿದು ಕೆಂಭಾವಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಈ ದುರ್ಘಟನೆಯಿಂದ ಗ್ರಾಮದಲ್ಲಿ ದುಃಖದ ವಾತಾವರಣ ಆವರಿಸಿದ್ದು, ಮೃತ ಮಕ್ಕಳ ಪೋಷಕರ ಆಕ್ರಂದನ ಹೃದಯ ವಿದ್ರಾವಕವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕೃಷಿ ಹೊಂಡಗಳ ಬಳಿ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮಕ್ಕಳಿಗೆ ಜಾಗೃತಿ ಮೂಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...