ಯಾದಗಿರಿ | ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ ನೀಡಿರುವುದು ಖಂಡನೀಯ: ಎಐಡಿಎಸ್‌ಒ

Date:

ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡುವ ಉದ್ದೇಶದಿಂದ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಸ್ವಾಗತಿಸುವುದಾಗಿ, ಆದರೆ ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ಗಳಿಗೆ ಮಾತ್ರ ಮೀಸಲಿಟ್ಟಿರುವ ಕ್ರಮವನ್ನು ತೀವ್ರವಾಗಿ ಖಂಡಿಸುವುದಾಗಿ ಎಐಡಿಎಸ್ಓ ತಿಳಿಸಿದೆ.

- Advertisement -

ಈ ಕುರಿತು ಪ್ರಕಟಣೆ ಹೊರಡಿಸಿದ ಎಐಡಿಎಸ್ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ, ‘ಇತ್ತೀಚೆಗೆ ನೇಮಕಗೊಂಡ 11 ಸಾವಿರ ಅತಿಥಿ ಶಿಕ್ಷಕರ ಹುದ್ದೆಗಳ ಹಂಚಿಕೆಯಲ್ಲಿಯೂ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶಿಕ್ಷಕರ ವರ್ಗಾವಣೆಯಲ್ಲೂ ಇದೇ ನೀತಿ ಅನುಸರಿಸಲಾಗುತ್ತಿದ್ದು, ದಶಕಗಳಿಂದ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸಿರುವ ಸರ್ಕಾರಿ ಶಾಲೆಗಳನ್ನು ಕಡೆಗಣಿಸಲಾಗುತ್ತಿದೆ’ ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

‘ಕೆಪಿಎಸ್ ಶಾಲೆಗಳಿಗೆ ಗ್ರಾಮೀಣ ಸರ್ಕಾರಿ ಶಾಲೆಗಳ ವಿಲೀನವನ್ನು ವಿರೋಧಿಸಿ ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಸಮಿತಿಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಸಾವಿರಾರು ಸರ್ಕಾರಿ ಶಾಲೆಗಳ ವಿಲೀನಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೂ ಸರ್ಕಾರವು ನೇರವಾಗಿ ಶಾಲೆಗಳನ್ನು ಮುಚ್ಚದೆ, ನೇಮಕಾತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೆಪಿಎಸ್ ಶಾಲೆಗಳಿಗೆ ಮಾತ್ರ ಒದಗಿಸುವ ಮೂಲಕ ಗ್ರಾಮೀಣ ಶಾಲೆಗಳನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಸುಮಾರು 7 ಸಾವಿರ ಏಕೋಪಾಧ್ಯಾಯ ಶಾಲೆಗಳಿದ್ದು, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅನೇಕ ಸರ್ಕಾರಿ ಶಾಲೆಗಳು ಶಿಕ್ಷಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಹೀಗಾಗಿ ಸರ್ಕಾರವು ಇಂತಹ ಶಾಲೆಗಳಿಗೆ ಮೊದಲ ಆದ್ಯತೆ ನೀಡಿ ಅಗತ್ಯ ಶಿಕ್ಷಕರನ್ನು ನೇಮಿಸಬೇಕು’ ಎಂದು ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ; ಎಐಡಿಎಸ್ಓ ತೀವ್ರ ವಿರೋಧ

‘ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು “ನಮ್ಮೂರ ಶಾಲೆ ಉಳಿಸಿ” ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕೆಂದು ಎಐಡಿಎಸ್ಓ ಕರೆ ನೀಡಿದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...