ಯಾದಗಿರಿ | ₹13 ಸಾವಿರ ಲಂಚ ಪಡೆಯುತ್ತಿದ್ದ ಹೆಡ್‌ ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

Date:

ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ ನಾಗೇಶ್ ಅವರು ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ₹13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

- Advertisement -

ತಾಲ್ಲೂಕಿನ ಮುನ್ನಾಳ ದೊಡ್ಡ ತಾಂಡಾ ನಿವಾಸಿ ಅಣ್ಣಯ್ಯ ರಾಠೋಡ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣ್ಣಯ್ಯ ರಾಠೋಡ ಅವರ ಬೈಕ್ ಅನ್ನು ಸಂಚಾರ ಪೊಲೀಸರು ವಶಪಡಿಸಿಕೊಂಡಿದ್ದರು. ಪ್ರಕರಣ ಇತ್ಯರ್ಥವಾದ ನಂತರವೂ ಬೈಕ್ ಬಿಡುಗಡೆ ಮಾಡಲು ನಾಗೇಶ್ ಅವರು ₹13 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ತಂಡ, ಯಾದಗಿರಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಾಗೇಶ್ ಅವರು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದುಕೊಂಡಿತು.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಎಸ್ಸೆಸ್ಸೆಲ್ಸಿ ಫಲಿತಾಂಶ | ಕಲಬುರಗಿ ಜಿಲ್ಲೆಗೆ ಕೊನೆ ಸ್ಥಾನ ಭದ್ರ : ಶೇ 85ರಷ್ಟು ಫಲಿತಾಂಶ

ಲೋಕಾಯುಕ್ತ ಡಿವೈಎಸ್‌ಪಿ ಜೆ.ಎಚ್. ಇನಾಮದಾರ್ ಹಾಗೂ ಇನ್‌ಸ್ಪೆಕ್ಟರ್ ಸಿದ್ದರಾಯ ಬಳ್ಳೂರಗಿ ನೇತೃತ್ವದ ತಂಡ ದಾಳಿ ನಡೆಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...