ಯಾದಗಿರಿ | ಭೀಕರ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

Date:

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿದ್ದಾರೆ. ಗಾಯಗೊಂಡ ಇಬ್ಬರು ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದಾರೆ.

- Advertisement -

ಮೃತರು ರಾಯಚೂರು ಜಿಲ್ಲೆಯ ಸಿರವಾರ ಮೂಲದವರಾಗಿದ್ದಾರೆ. ಶರಣಪ್ಪ, ಕೃಷ್ಣ, ಅನಂತಕಲಾ ಸೇರಿ ಆರು ಮಂದಿ ಸಜೀವ ದಹನವಾಗಿದ್ದಾರೆ. ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಮೂವರು ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕ್ಷಣಾರ್ಧದಲ್ಲಿ ಎರಡೂ ವಾಹನಗಳಿಗೆ ಬೆಂಕಿ ತಗುಲಿ ಅನಾಹುತ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಡಾ.ಬಿ.ಆರ್ ಅಂಬೇಡ್ಕರ್ ಕವಿತೆಗಳ ವಾಚನ ಗೋಷ್ಠಿ

ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದು, ಗುರುತಿಸಲೂ ಸಾಧ್ಯವಾಗದ ಸ್ಥಿತಿಗೆ ದೇಹಗಳು ಕರಕಲಾಗಿವೆ. ಬಸ್ ಕೂಡ ಬೆಂಕಿಗಾಹುತಿಯಾಗಿದ್ದು, ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ಉಂಟಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು...

ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ ಬೆಳಗಿದ ರೋಚಕ ಕತೆ ಗೊತ್ತೇ?

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ...