ಯಾದಗಿರಿ | ರಸ್ತೆ ಇಕ್ಕೆಲಗಳಲ್ಲಿ ಡಬ್ಬಿ ಅಂಗಡಿಗಳ ಅಟ್ಟಹಾಸ; ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

Date:

ಯಾದಗಿರಿಯ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಅಕ್ರಮ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ, ಬಾಡಿಗೆ ಕೊಡಲಾಗಿದೆ. ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಈ ಅಕ್ರಮವನ್ನು ತಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಕೆ ಮುದ್ನಾಳ್ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಹೇಳಿಕೆ ನೀಡಿರುವ ಅವರು‌, “ಈ ಹಿಂದೆ ತಾಲೂಕು ಇದ್ದಾಗ ಯಾವುದೇ ಒಂದು ಪೆಟ್ಟಿಗೆ ಅಂಗಡಿಗಳೂ ಇರಲಿಲ್ಲ. ಜಿಲ್ಲೆಯಾದ ಬಳಿಕ ಶಾಸ್ತ್ರಿ ವೃತ್ತದಿಂದ ಜೆಸ್ಕಾಂ ಇಇ ಕಚೇರಿವರೆಗೆ ಪೋಸ್ಟ್ ಆಫೀಸ್‌ನಿಂದ ಕೋರ್ಟಿನವರೆಗೆ, ಚಿತ್ತಾಪೂರ ರಸ್ತೆಯ ಡಿಗ್ರಿ ಕಾಲೇಜಿನಿಂದ ಆರ್‌ಟಿಒವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಅಕ್ರಮ ಡಬ್ಬಿಗಳು ತಲೆ ಎತ್ತಿವೆ. ಇವುಗಳಿಗೆ ಯಾರು ಪರವಾನಿಗೆ ನೀಡಿದರು ಎಂಬುದನ್ನು ಜಿಲ್ಲಾಡಳಿತ ಹಾಗೂ ನಗರಸಭೆಯವರು ತುರ್ತಾಗಿ ಎರಡು ದಿನಗಳಲ್ಲಿ ಉತ್ತರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈ ಕುರಿತು ಜೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಗಮನಕ್ಕೆ ತಂದ ಮೇಲೆಯೂ ವಿದ್ಯುತ್ ಸಂಪರ್ಕ ಹಾಗೂ ಡಬ್ಬಿಗಳ ಇಟ್ಟುಕೊಳ್ಳಲು ಅನುಮತಿ ಕೊಟ್ಟಿದ್ದಾರೆ. ಇವುಗಳನ್ನು ಹಾಕಿದ್ದರಿಂದ ಕಚೇರಿಗಳ ನಾಮಫಲಕಗಳೂ ಕಾಣದಂತೆ ಡಬ್ಬದಂಗಡಿಗಳು ತಲೆ ಎತ್ತಿವೆ.
ಅಲ್ಲದೆ ಈ ಡಬ್ಬಿಗಳಲ್ಲಿರುವವರು ಕಸ ಕಡ್ಡಿಯನ್ನು ಗುಡಿಸಿ ಚರಂಡಿಗೆ ತುಂಬುತ್ತಿದ್ದಾರೆ. ಮೊದಲೇ ನಗರಸಭೆಯಲ್ಲಿ ಪೌರಕಾರ್ಮಿಕರ ಕೊರತೆ ಇದೆ. ಅದರಲ್ಲೂ ಇವರು ಸಿಮೆಂಟ್ ಕಾಂಕ್ರೀಟ್ ಹಾಕಿ ಚರಂಡಿ ಮುಚ್ಚಿ ಮೇಲೆ ಡಬ್ಬಿಗಳನ್ನು ಇಟ್ಟುಕೊಂಡಿದ್ದರಿಂದ ಚರಂಡಿಗಳು ಮುಚ್ಚಿಹೋಗಿವೆ. ಇದೇ ರಸ್ತೆಯಲ್ಲಿ ಅಧಿಕಾರಿಗಳು ಸಂಚರಿಸುತ್ತಿದ್ದರೂ ಕಣ್ಣಿಗೆ ಕಾಣುತ್ತಿಲ್ಲವೇ” ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ.

“ಈ ಡಬ್ಬದ ಅಂಗಡಿಗಳು ದಲ್ಲಾಳಿಗಳ ಅಡ್ಡಗಳಾಗಿವೆ. ಸರ್ಕಾರಿ ಕಚೇರಿಗೆ ಬರುವ ಮುಗ್ದ ಗ್ರಾಮೀಣ ಜನರಿಗೆ ಕೆಲಸ ಮಾಡಿಕೊಡುವುದಾಗಿ ಹೇಳಿ ಸಾಲ ಸೌಲಭ್ಯ ಒದಗಿಸಿಕೊಡುವುದಾಗಿ ಹೇಳಿ ಅವರಿಂದ ರಾಜಾರೋಷವಾಗಿ ಹಣ ಪೀಕುತ್ತಿದ್ದಾರೆ. ಇದರಿಂದ ಬಡ ಜನತೆ ಹಣ ಕಳೆದುಕೊಂಡು ಹತಾಶರಾಗುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆ ರಚನೆ ಮತ್ತು ಆರ್ಟಿಕಲ್ 371(ಜೆ) ಸೇರ್ಪಡೆಗೆ ಆಗ್ರಹ

“ನಾಯಿಕೊಡೆಗಳಂತೆ ತೆಲೆ ಎತ್ತಿರುವ ಡಬ್ಬಿಗಳನ್ನು ತುರ್ತಾಗಿ ತೆರವು ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಡೆಯಬೇಕು, ಮುಗ್ದ ಜನರಿಗೆ ಆಗುತ್ತಿರುವ ವಂಚನೆಯನ್ನು ತಡೆಗಟ್ಟಬೇಕು. ಇಲ್ಲವಾದಲ್ಲಿ ನಗರಸಭೆ ಕಚೇರಿಗೆ ಜಾಲಿ ಮುಳ್ಳುಗಳನ್ನು ಬಡಿದು ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...