ಯಾದಗಿರಿ | ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಧಿಕಾರಿಗಳಿಗೆ ಸೂಚನೆ : ಸಿಇಒ ಲವೀಶ್ ಒರಡಿಯಾ

Date:

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಲವೀಶ್ ಒರಡಿಯಾ ಅವರು ಶುಕ್ರವಾರ ತಾಲೂಕಿನ ನಾಗನಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಧಿಕಾರಿಗಳಿಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

- Advertisement -

ಗ್ರಾಮ ಪಂಚಾಯಿತಿಯಲ್ಲಿ ಜಾರಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕಡತಗಳನ್ನು ಪರಿಶೀಲಿಸಿದ ಅವರು, ‘ಬಳಿಕ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು. ಬೇಸಿಗೆಯ ತೀವ್ರತೆಯಿಂದ ಭೂಗರ್ಭ ಜಲಮಟ್ಟ ಕುಸಿಯುತ್ತಿರುವುದರಿಂದ, ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳನ್ನು ಗುರುತಿಸಿ, ಪರ್ಯಾಯ ವ್ಯವಸ್ಥೆಗಳನ್ನು ಪೂರ್ವಸಿದ್ಧತೆಯೊಂದಿಗೆ ಸಿದ್ಧಪಡಿಸಬೇಕು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಬಾಣತಿಹಾಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿರುವ ಕುರಿತು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಿಇಒ, ತಾತ್ಕಾಲಿಕವಾಗಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ’ ಸೂಚಿಸಿದರು.

ಇದೇ ವೇಳೆ ಕರ ವಸೂಲಿ, ನರೇಗಾ, ವಸತಿ ಯೋಜನೆ, ಸ್ವಚ್ಛ ಭಾರತ್ ಮಿಷನ್ ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದು, ತೆರಿಗೆ ಸಂಗ್ರಹಣೆಯನ್ನು ಕಡ್ಡಾಯವಾಗಿ ನಡೆಸುವಂತೆ ಪಿಡಿಒಗೆ ತಾಕೀತು ಮಾಡಿದರು. ಶುದ್ಧಗಂಗಾ (ಆರ್‌ಒ ಪ್ಲಾಂಟ್) ದುರಸ್ಥಿಯಲ್ಲಿರುವುದನ್ನು ಗಮನಿಸಿ, ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ’ ಸೂಚಿಸಿದರು.

‘ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ಸ್ವಚ್ಛ ವಾಹಿನಿ ಮೂಲಕ ತ್ಯಾಜ್ಯ ಸಂಗ್ರಹಣೆ ಮಾಡಿ ವೈಜ್ಞಾನಿಕವಾಗಿ ಸಂಸ್ಕರಿಸುವುದರ ಜೊತೆಗೆ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜನಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

‘ಭೇಟಿ ವೇಳೆ ಕುಡಿಯುವ ನೀರು ಪೂರೈಕೆ, ಚರಂಡಿ ಸ್ವಚ್ಛತೆ, ವಸತಿ ಅನುದಾನ, ಶಾಲಾ ಶೌಚಾಲಯ ನಿರ್ಮಾಣ, ನರೇಗಾ ಕೂಲಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿ, ಶೀಘ್ರ ಪರಿಹಾರಕ್ಕೆ ಭರವಸೆ’ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ಪಿಡಿಒ ಅಕ್ಕನಾಗಮ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...