ಕ್ವಿಟ್ ಇಂಡಿಯಾ ಚಳವಳಿ ನೆನಪಾರ್ಥ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಮತ್ತು ಜೆಸಿಟಿಯು ಕರೆ ನೀಡಿದ್ದ ದೇಶವ್ಯಾಪಿ ಜೈಲ್ ಭರೋ ಚಳವಳಿಯ ಅಂಗವಾಗಿ ಯಾದಗಿರಿಯಲ್ಲಿ ರೈತ, ಕಾರ್ಮಿಕರ ನೇತೃತ್ವದೊಂದಿಗೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆ ಪೊಲೀಸರು, ರೈತರು, ಕೃಷಿ ಕೂಲಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟದ ನೌಕರರನ್ನು ಬಂಧಿಸಿದರು.
ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಲಕಾಲ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿದ್ದೀರಾ? ರಾಯಚೂರು | ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ, ಕಾರ್ಮಿಕ ವಿರೋಧಿ ನೀತಿ ವಿರುದ್ಧ ʼಜೈಲ್ ಭರೋ’ ಚಳವಳಿ
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದರು. ಪ್ರತಿಭಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.




