ಯಾದಗಿರಿ | ಅಂಬೇಡ್ಕರ್ ಚಿಂತನೆಗಳೊಂದಿಗೆ ವಡಗೇರಾದಲ್ಲಿ ಜಯಂತಿ ಆಚರಣೆ

Date:

ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಿಯೋಜಿತ ನಿವೇಶನದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೂ ಮುನ್ನ ವಾಲ್ಮಿಕಿ ವೃತ್ತದಿಂದ ಭವನದ ಸ್ಥಳದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪತ್ರಕರ್ತ ದೇವಿಂದ್ರ ಹುಲ್ಕಲ್ (ಜೆ) ಮಾತನಾಡಿ, “ಶಿಕ್ಷಣವೇ ಶಕ್ತಿ, ಸಂವಿಧಾನವೇ ಮಾರ್ಗ” ಎಂಬ ಅಂಬೇಡ್ಕರ್ ಅವರ ಸಂದೇಶವನ್ನು ಸ್ಮರಿಸಿದರು. “ಶಿಕ್ಷಣ ಎಂಬುದು ಹುಲಿಯ ಹಾಲು; ಅದನ್ನು ಕುಡಿದವರು ಗರ್ಜಿಸಲೇಬೇಕು” ಎಂಬ ಅವರ ಪ್ರಸಿದ್ಧ ವಾಕ್ಯವನ್ನು ಉಲ್ಲೇಖಿಸಿ, ಶಿಕ್ಷಣವು ಸಮಾಜ ಪರಿವರ್ತನೆಯ ಅತ್ಯಂತ ಪ್ರಮುಖ ಸಾಧನವಾಗಿದ್ದು, ವ್ಯಕ್ತಿಯ ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯದ ಸಾಧನೆಗೆ ದಾರಿ ತೋರಿಸುತ್ತದೆ’ ಎಂದು ಹೇಳಿದರು.

‘ಅಂಬೇಡ್ಕರ್ ಅವರು ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರೂ ತಮ್ಮ ಅಸಾಧಾರಣ ಪರಿಶ್ರಮ ಮತ್ತು ಸಂಕಲ್ಪದ ಮೂಲಕ ಉನ್ನತ ಶಿಕ್ಷಣ ಪಡೆದು, ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ನೀಡಿದರು ಎಂದು ಹೇಳಿದರು. ಸಂವಿಧಾನದ ಮೂಲಕ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಪ್ರತಿಷ್ಠಾಪಿಸಿದ ಅವರು, ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿದ ಮಹಾನ್ ನಾಯಕರು’ ಎಂದು ಕೊಂಡಾಡಿದರು.

‘ಚೌಡರ್ ಕೆರೆ ಸತ್ಯಾಗ್ರಹ ಹಾಗೂ ನಾಸಿಕ್ ದೇವಸ್ಥಾನ ಪ್ರವೇಶ ಹೋರಾಟಗಳಂತಹ ಐತಿಹಾಸಿಕ ಸಾಮಾಜಿಕ ಚಳವಳಿಗಳನ್ನು ಸ್ಮರಿಸಿದ ಅವರು, ಅಂಬೇಡ್ಕರ್ ಅವರು “ಮೂಕನಾಯಕ” ಮತ್ತು “ಬಹಿಷ್ಕೃತ ಭಾರತ” ಪತ್ರಿಕೆಗಳ ಮೂಲಕ ದಲಿತ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳ ಪರವಾಗಿ ಜಾಗೃತಿ ಮೂಡಿಸಿದರು’ ಎಂದು ಹೇಳಿದರು.

‘ಮಹಿಳಾ ಸಬಲೀಕರಣದ ಕ್ಷೇತ್ರದಲ್ಲಿ ಅಂಬೇಡ್ಕರ್ ಅವರ ಕೊಡುಗೆಗಳನ್ನು ಉಲ್ಲೇಖಿಸಿ, ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಒದಗಿಸಿದ ಪರಿಣಾಮವಾಗಿ ಇಂದು ಮಹಿಳೆಯರು ಶಿಕ್ಷಣ, ಉದ್ಯೋಗ ಮತ್ತು ಆಡಳಿತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು. 1956ರಲ್ಲಿ ನಡೆದ ಬೌದ್ಧ ಧರ್ಮ ಸ್ವೀಕಾರವನ್ನು ಅವರು ಸಾಮಾಜಿಕ ಪರಿವರ್ತನೆಯ ಮಹತ್ವದ ಘಟ್ಟವೆಂದು’ ವಿವರಿಸಿದರು.

1599613

ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಸುರೇಶ್ ನಾಯಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಹಿರೇಮಠ, ಪಿಎಸ್‌ಐ ಮಹಿಬೂಬ್ ಅಲಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದಣ್ಣಗೌಡ ಕಾಡಂನೋರ್ ಹಾಗೂ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಡಾ. ಗಾಳೆಪ್ಪ ಪೂಜಾರಿ ಸೇರಿದಂತೆ ಹಲವರು ಮಾತನಾಡಿ ಅಂಬೇಡ್ಕರ್ ಅವರ ಆದರ್ಶಗಳನ್ನು ಸ್ಮರಿಸಿದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಶ್ರೀಮತಿ ಮಂಗಳಾ ಮಾತನಾಡಿ, ‘ಯಾದಗಿರಿ ಜಿಲ್ಲೆಯ ನಾಲ್ವರು ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವುದು ಜಿಲ್ಲೆಯ ಹೆಮ್ಮೆ ಎಂದು ಹೇಳಿದರು. ವಿದ್ಯಾರ್ಥಿಗಳು ಸಾಧನೆ ಮಾಡಲು ಪೋಷಕರು ಮತ್ತು ಶಿಕ್ಷಕರು ಸಮರ್ಪಕ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು. ಅಂಬೇಡ್ಕರ್ ಅವರ ಸಂವಿಧಾನದ ಫಲವಾಗಿ ತಾವು ತಹಶೀಲ್ದಾರ್ ಹುದ್ದೆಗೆ ಏರಲು ಸಾಧ್ಯವಾಯಿತು ಎಂದು ಹೇಳಿ, ಮಹಿಳೆಯರು ಇನ್ನಷ್ಟು ಸಾಧನೆ ಮಾಡಲಿ’ ಎಂದು ಆಶಿಸಿದರು.

ಇದನ್ನು ಓದಿದ್ದೀರಾ? ಶಹಾಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅರ್ಥಪೂರ್ಣ ಆಚರಣೆ

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೀತೆ ಹಾಡಿದರು. ಬಸ್ಸು ಕ್ಯಾತನಾಳ್ ಅಂಬೇಡ್ಕರ್ ಕುರಿತು ಗೀತೆ ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತಂದರು.
ಶಿಕ್ಷಕರಾದ ಸಂತೋಷ ಸ್ವಾಗತಿಸಿದರು, ಸಾಹೇಬರೆಡ್ಡಿ ಇಟಗಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ವಂದನೆ ಸಲ್ಲಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...