ಯಾದಗಿರಿ | ಕಾಟಾಚಾರ ರಸ್ತೆ ದುರಸ್ತಿ; ದಸಂಸ ಆಕ್ರೋಶ

Date:

ಹತ್ತಿಗೂಡೂರುದಿಂದ ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಯ ದುಸ್ಥಿತಿ ತೀವ್ರವಾಗಿದ್ದು, ಅಲ್ಲಲ್ಲಿ ಗುಂಡಿಗಳಿಂದ ರಸ್ತೆ ತುಂಬಿ ಹೋಗಿದೆ. ರಾಜ್ಯದ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆಂಬ ಭೀತಿಯಿಂದ ಅಧಿಕಾರಿಗಳು ಕಾಟಾಚಾರಕ್ಕಾಗಿ ಗುಂಡಿಗಳಿಗೆ ಕೆಂಪು ಮಣ್ಣು ಸುರಿದು ಮುಚ್ಚುತ್ತಿರುವುದು ಅತ್ಯಂತ ಬೇಜವಾಬ್ದಾರಿತನವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

- Advertisement -

ಇದೇ ರಾಜ್ಯ ಹೆದ್ದಾರಿಯಲ್ಲಿ ಸಚಿವರು, ಸಂಸದರು ಹಾಗೂ ರಾಜ್ಯ–ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳು ನಿರಂತರವಾಗಿ ಸಂಚರಿಸುತ್ತಿದ್ದರೂ, ರಸ್ತೆಯ ದುಸ್ಥಿತಿಯನ್ನು ಕಣ್ಣಿದ್ದರೂ ಕಾಣದಂತೆ ವರ್ತಿಸುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಹತ್ತಿಗೂಡೂರು ಶರಣರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
1320850

ಹತ್ತಿಗೂಡೂರು–ಬೆಂಗಳೂರು ಸಂಪರ್ಕ ಕಲ್ಪಿಸುವ ಈ ಮುಖ್ಯ ರಸ್ತೆಯಲ್ಲಿ ದಿನೇದಿನೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಹತ್ತಿಗೂಡೂರು ಗ್ರಾಮದ ಸಮೀಪದ ಹಳ್ಳದ ಸೇತುವೆ ಅತೀ ಚಿಕ್ಕದಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಸಾಯಂಕಾಲ ವೇಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಜೀವಭಯದಲ್ಲಿ ಸಂಚರಿಸುವಂತಾಗಿದೆ.

ಈ ಸೇತುವೆ ಬಳಿ ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿದ್ದರೂ, ಈ ಕುರಿತು ಜಿಲ್ಲೆಯ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರೂ ಅವರು ಮೂಕಪ್ರೇಕ್ಷಕರಂತೆ ವರ್ತಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಬೇಸರಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈತನ ಕಬ್ಬಿನ ತೋಟ ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಗಳ ನಿವಾಸಿಗಳು ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸಬಹುದೆಂಬ ಆತಂಕದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...