ಯಾದಗಿರಿ | ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮೂಲಕ ಅರ್ಥಪೂರ್ಣ ಜನ್ಮದಿನ ಆಚರಣೆ

Date:

ಸಮಾಜಮುಖಿ ಕಾರ್ಯಗಳ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂದೇಶ ಸಾರುವ ಉದ್ದೇಶದಿಂದ, ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಕಾರ್ಮಿಕ ಘಟಕದ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ಅವರ ಜನ್ಮದಿನದ ಅಂಗವಾಗಿ ಬುಧವಾರ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ವಿಶೇಷ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

- Advertisement -

ಸುರಪುರ ತಾಲೂಕಿನ ಕೆಂಭಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರೋಗಿಗಳು ಹಾಗೂ ಅವರ ಬಂಧುಗಳು ಈ ಸೇವಾ ಕಾರ್ಯವನ್ನು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
1733502

ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ವೈದ್ಯರಾದ ಡಾ. ಬನೆಪ್ಪ ಮಾತನಾಡಿ, “ಸಮಾಜ ಸೇವೆಯ ಮೂಲಕ ಜನ್ಮದಿನವನ್ನು ಆಚರಿಸಿಕೊಳ್ಳುವುದು ನಿಜಕ್ಕೂ ಶ್ಲಾಘನೀಯ. ಇಂತಹ ಕಾರ್ಯಗಳು ಇತರರಿಗೂ ಪ್ರೇರಣೆಯಾಗಲಿ ಮತ್ತು ಸಮಾಜದಲ್ಲಿ ಸೇವಾ ಮನೋಭಾವ ಹೆಚ್ಚಳವಾಗಲಿ,” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕಾರ್ಯಕ್ರಮದಲ್ಲಿ ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಅಧ್ಯಕ್ಷರಾದ ಶರಣು ದೇವರಮನಿ, ಪ್ರಮುಖರಾದ ಮುರ್ತುಜಾ ಸುರಪುರ, ಮಾಹತೇಶ ಸಿರಿ, ಕೃಷ್ಣ ವಸ್ಟರ್, ನಾರಾಯಣ ಸೂರ್ಯವಂಶಿ, ಶರಣು ಖಾನಾಪುರ ಹಾಗೂ ಆನಂದ ಆಶಿಂಗಳ ಸೇರಿದಂತೆ ಸಂಘಟನೆಯ ಅನೇಕ ಕಾರ್ಯಕರ್ತರು ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವು ಸರಳವಾಗಿ ನಡೆದರೂ ಸಾಮಾಜಿಕ ಕಾಳಜಿಯ ಸಂದೇಶವನ್ನು ಹೊತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...