ಯಾದಗಿರಿ | ರೈತ ತರಬೇತಿ ಕೇಂದ್ರ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್

Date:

ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಯಾದಗಿರಿಯ ಬಡೇಪಲ್ಲಿ ಗ್ರಾಮದಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದರು.

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಬಾರ್ಡ್ ಸಹಯೋಗದೊಂದಿಗೆ ಧನಸಹಾಯ ಪಡೆದಿರುವ ಯಾದಗಿರಿಯ ಈ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವು, ಕಡಲೇಕಾಯಿಯನ್ನು ಹೆಚ್ಚಿನ ಬೇಡಿಕೆಯಿರುವ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳಾಗಿ ಸಂಸ್ಕರಿಸುವ ಪ್ರಮುಖ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

ಯಾದಗಿರಿಯು ವಾರ್ಷಿಕವಾಗಿ ಸುಮಾರು 22,500 ಮೆಟ್ರಿಕ್ ಟನ್ ಕಡಲೆಕಾಯಿಯನ್ನು ಉತ್ಪಾದಿಸುತ್ತದೆ. ಆದಾಗ್ಯೂ, ಅದರಲ್ಲಿ ಹೆಚ್ಚಿನದನ್ನು ಕಚ್ಚಾ ಉತ್ಪನ್ನವಾಗಿಯೇ ಮಾರಾಟ ಮಾಡಲಾಗುತ್ತಿದ್ದು, ಇದು ರೈತರಿಗೆ ಸೀಮಿತ ಆದಾಯವನ್ನು ನೀಡುತ್ತಿದೆ. ಆದ್ದರಿಂದ, ಕಡಲೆಕಾಯಿಯನ್ನು ಪೀನಟ್ ಬಟರ್, ಎಣ್ಣೆ, ಉಪ್ಪು ಹಾಕಿದ ಮತ್ತು ಹುರಿದ ಕಡಲೆಕಾಯಿ ಹಾಗೂ ಚಿಕ್ಕಿಯಂತಹ ಹೆಚ್ಚಿನ ಮೌಲ್ಯದ ಉತ್ಪನ್ನಗಳಾಗಿ ಪರಿವರ್ತಿಸಲು ಆಧುನಿಕ ಕಡಲೆಕಾಯಿ ಸಂಸ್ಕರಣೆ ಮತ್ತು ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ರೈತರ ಆದಾಯ ವೃದ್ಧಿ, ಮಾರುಕಟ್ಟೆ ವಿಸ್ತರಣೆ ಮತ್ತು ಪ್ರಾದೇಶಿಕ ಸಮೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ.

ಮುಖ ಸಂಸ್ಥೆಯಾದ ‘ಬಾಡೇಪಲ್ಲಿ ಮಹಿಳಾ ರೈತ ಉತ್ಪಾದಕರ ಕಂಪನಿ ನಿಯಮಿತ’ವು (FPC) ಈ ಘಟಕವನ್ನು ನಿರ್ವಹಿಸಲಿದ್ದು, ಸಂಸ್ಕರಣೆ, ತರಬೇತಿ ಮತ್ತು ಮಾರುಕಟ್ಟೆ ಪ್ರಕ್ರಿಯೆಗಳನ್ನು ಒಂದೇ ಸೂರಿನಡಿ ಸಂಯೋಜಿಸಲಿದೆ.

- Advertisement -

ಯಾದಗಿರಿಯ ಈ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವು ಕೊಯ್ಲಿನ ನಂತರದ ಮೂಲಸೌಕರ್ಯವನ್ನು ಆಧುನೀಕರಿಸಲು, ಗುಣಮಟ್ಟ ನಿಯಂತ್ರಣವನ್ನು ಜಾರಿಗೆ ತರಲು ಮತ್ತು ಜಮೀನಿನಿಂದ ನೇರವಾಗಿ ಮಾರುಕಟ್ಟೆಗೆ ಸಂಪರ್ಕವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಕೇಂದ್ರವು ರೈತರನ್ನು ಸಬಲೀಕರಿಸುವುದಲ್ಲದೆ, ಕೊಯ್ಲಿನ ನಂತರದ ನಷ್ಟವನ್ನು ಕಡಿಮೆ ಮಾಡುತ್ತದೆ ಮತ್ತು ದೇಶೀಯ ಹಾಗೂ ಜಾಗತಿಕ ಮಾರುಕಟ್ಟೆಗಳಿಗಾಗಿ ಬ್ರ್ಯಾಂಡೆಡ್ ಉತ್ಪನ್ನಗಳನ್ನು ಸೃಷ್ಟಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...