ಯಾದಗಿರಿ | ಎಸ್‌ಐಆರ್ ಪ್ರಕ್ರಿಯೆಯಿಂದ ಒಬ್ಬ ಅರ್ಹ ಮತದಾರರೂ ಹೊರಗುಳಿಯಬಾರದು; ದಸಂಸ ಎಚ್ಚರಿಕೆ

Date:

ರಾಜ್ಯದಲ್ಲಿ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ, ಒಬ್ಬ ಅರ್ಹ ಮತದಾರರೂ ಪಟ್ಟಿಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಸಂಸ ಮುಖಂಡರು ಬುಧವಾರ ಮನವಿ ಸಲ್ಲಿಸಿದರು.

- Advertisement -

ಕರ್ನಾಟಕದ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಮಾರ್ಗ (ರಿ.) ತಾಲೂಕು ಸಮಿತಿ ಶಹಾಪುರ ವತಿಯಿಂದ ತಹಶೀಲ್ದಾರರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

‘ಮನವಿ ಸಲ್ಲಿಸಿ ರಾಜ್ಯ ಸಮಿತಿ ಸದಸ್ಯ ಶಿವು ಪೋತೆ ಮಾತನಾಡಿ, ‘ಎಸ್‌ಐಆರ್‌ ಪ್ರಕ್ರಿಯೆ ಪ್ರಜಾತಂತ್ರದ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದ್ದು, ಕಾಗದ ಪತ್ರಗಳ ಆಧಾರದ ಮೇಲೆ ಜೀವಂತ ಪ್ರಜೆಗಳನ್ನೇ ಅನುಮಾನಿಸುವ ಧೋರಣೆಯನ್ನು ಪ್ರತಿಬಿಂಬಿಸುತ್ತಿದೆ’ ಎಂದು ಆರೋಪಿಸಿದರು.

‘ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಬಡಜನರು ದಾಖಲೆಗಳ ಕೊರತೆಯಿಂದಾಗಿ ಮತದಾನದ ಹಕ್ಕಿನಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದ್ದು, ಅರ್ಹ ಪ್ರಜೆಗಳ ಹಕ್ಕುಗಳನ್ನು ಜೀವಂತದಲ್ಲಿಯೇ ನಿರಾಕರಿಸುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

‘ಇತರ ರಾಜ್ಯಗಳಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಗಳಲ್ಲಿ ಲಕ್ಷಾಂತರದಿಂದ ಕೋಟ್ಯಂತರ ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟಿರುವ ಉದಾಹರಣೆಗಳಿವೆ. 20 ಲಕ್ಷದಿಂದ 3 ಕೋಟಿವರೆಗೆ ಮತದಾರರನ್ನು ಹೊರತುಪಡಿಸಿದ ಘಟನೆಗಳು ವರದಿಯಾಗಿವೆ. ಇದೇ ಪರಿಸ್ಥಿತಿ ಕರ್ನಾಟಕದಲ್ಲೂ ಮರುಕಳಿಸುವ ಸಾಧ್ಯತೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ’ ಎಂದು ಹೇಳಿದರು.

1600038

ಎಸ್‌ಐಆರ್ ಪ್ರಕ್ರಿಯೆಯನ್ನೇ ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದ ಅವರು, ಅನಿವಾರ್ಯವಾಗಿ ಪ್ರಕ್ರಿಯೆ ಮುಂದುವರಿಸಿದಲ್ಲಿ ಕೆಲವು ಪ್ರಮುಖ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮುಖಂಡರ ಪ್ರಮುಖ ಆಗ್ರಹಗಳು

‘ಪಶ್ಚಿಮ ಬಂಗಾಳ ಮಾದರಿಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ವಾರ್ಡ್‌ಗಳಲ್ಲಿ “ಮತದಾರರ ನೆರವು ಕೇಂದ್ರ”ಗಳನ್ನು ಸ್ಥಾಪಿಸಬೇಕು. ಜನರಿಗೆ ತಕ್ಷಣದ ಸಹಾಯ ಒದಗಿಸಲು “ಮತದಾರರ ಹೆಲ್ಪ್‌ಲೈನ್” ಆರಂಭಿಸಬೇಕು’ ಎಂದು ಅವರು ಹೇಳಿದರು.

‘ಕೇರಳ ಮಾದರಿಯಲ್ಲಿ ದಾಖಲೆಗಳಿಲ್ಲದ ಅರ್ಹ ನಾಗರಿಕರಿಗೆ ತೊಂದರೆ ನೀಡದೇ, ತ್ವರಿತವಾಗಿ ವಾಸಸ್ಥಳ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದರು.

‘ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಅಂತಿಮ ಮತಪಟ್ಟಿ ಪ್ರಕಟಿಸುವ ಮೊದಲು ಗ್ರಾಮಸಭೆ/ವಾರ್ಡ್ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ಕರಡು ಪಟ್ಟಿಯನ್ನು ಸಾರ್ವಜನಿಕರ ಮುಂದೆ ಇಟ್ಟು ತಿದ್ದುಪಡಿ ಸ್ವೀಕರಿಸಬೇಕು’ ಎಂದು ಹೇಳಿದರು.

‘ಇನ್ನೂ, ಕರ್ನಾಟಕದಲ್ಲಿ ಚುನಾವಣೆಗಳಿಗೆ ಸಾಕಷ್ಟು ಸಮಯವಿದ್ದು, ಎಸ್‌ಐಆರ್ ಸಂಬಂಧಿತ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವ ಹಿನ್ನೆಲೆ, ಈ ಪ್ರಕ್ರಿಯೆಯನ್ನು ಹಡಾಹುಡಿಯಲ್ಲಿ ನಡೆಸಬಾರದು’ ಎಂದು ಅವರು ಆಗ್ರಹಿಸಿದರು.

“ಹೊರತಳ್ಳುವುದಲ್ಲ, ಒಳಗೊಳ್ಳುವುದು” ಎಂಬ ಮಾನವೀಯ ತತ್ವದೊಂದಿಗೆ ಪ್ರಕ್ರಿಯೆ ನಡೆಯಬೇಕು. ದಾಖಲೆಗಳ ಕೊರತೆಯೇ ಅರ್ಹ ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸುವ ಕಾರಣವಾಗಬಾರದು. ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ’ ಎಂದು ಮುಖಂಡರು ಅಭಿಪ್ರಾಯಪಟ್ಟರು.

‘ಯಾವುದೇ ಅರ್ಹ ಮತದಾರರನ್ನು ಹೊರಗುಳಿಸಿ ಗಡಿಬಿಡಿಯಲ್ಲಿ ಮತಪಟ್ಟಿಯನ್ನು ಅಂತಿಮಗೊಳಿಸಿದಲ್ಲಿ, ಅಂತಹ ಪಟ್ಟಿಯನ್ನು ನಾವು ಒಪ್ಪುವುದಿಲ್ಲ. ಆಧಾರದ ಮೇಲೆ ನಡೆಯುವ ಚುನಾವಣೆಯನ್ನು ಸಹ ವಿರೋಧಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.

‘ಈ ಸಂದರ್ಭದಲ್ಲಿ ಮುಖಂಡರು ತಮ್ಮ ಆಗ್ರಹಗಳನ್ನು ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ’ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಅಂಬೇಡ್ಕರ್ ಚಿಂತನೆಗಳೊಂದಿಗೆ ವಡಗೇರಾದಲ್ಲಿ ಜಯಂತಿ ಆಚರಣೆ

ಈ ಸಂದರ್ಭದಲ್ಲಿ ಶರಣು ದೋರನಹಳ್ಳಿ, ರಾಜು ಅಣಬಿ, ಬಸವರಾಜ ಚಿಪ್ಪಾರ, ನಿಂಗಪ್ಪ ಸತ್ಯಂಪೇಠ, ಶೇಖರ್ ಬಡಿಗೇರ, ಸಂತೋಷ ಹೊಸ್ಮನಿ, ಸುನೀಲ್ ಹೊಸ್ಮನಿ, ಜೈ ಭೀಮ ಯಮನೂರ್, ಬಸ್ಸು ಅನವಾರ ಇನ್ನಿತರರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...