ಯಾದಗಿರಿ | 75 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ! ಗೊಗಡಿಹಾಳ ಶಾಲೆಯ ದುಸ್ಥಿತಿ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

Date:

ಗೊಗಡಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹೆಚ್ಚುವರಿ ಶಿಕ್ಷಕರನ್ನು ನೇಮಿಸಿ, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ನೇತೃತ್ವದಲ್ಲಿ ಶಾಲಾ ಮಕ್ಕಳು ಹಾಗೂ ಪೋಷಕರು ಸೋಮವಾರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿಪಿಐ) ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಸುರಪುರ ತಾಲೂಕಿನ ಗೊಗಡಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 75ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇಡೀ ಶಾಲೆಗೆ ಕೇವಲ ಒಬ್ಬರೇ ಖಾಯಂ ಶಿಕ್ಷಕರಿದ್ದಾರೆ. ಐದು ತರಗತಿಗಳ ಬೋಧನಾ ಜವಾಬ್ದಾರಿಯನ್ನು ಒಬ್ಬರೇ ಶಿಕ್ಷಕರು ನಿರ್ವಹಿಸುತ್ತಿರುವುದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಶಾಲೆಯಲ್ಲಿ ಶಿಕ್ಷಕರ ಕೊರತೆಯ ಜೊತೆಗೆ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಸುಸಜ್ಜಿತ ಶೌಚಾಲಯ ಹಾಗೂ ಆಟದ ಮೈದಾನದಂತಹ ಮೂಲಭೂತ ಸೌಲಭ್ಯಗಳ ಕೊರತೆಯೂ ಇದೆ. ಇದರಿಂದ ವಿದ್ಯಾರ್ಥಿಗಳು ಪ್ರತಿದಿನ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಪೋಷಕರು ದೂರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ., ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಅಧಿಕಾರಿಗಳು ಕೇವಲ ಭರವಸೆ ನೀಡದೇ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

1996624

ಮನವಿ ಪತ್ರ ಸ್ವೀಕರಿಸಲು ಅಧಿಕಾರಿಗಳು ಎರಡು ಬಾರಿ ಬಂದರೂ ಸ್ಪಷ್ಟ ಭರವಸೆ ನೀಡದ ಕಾರಣ ಪೋಷಕರು ಮತ್ತು ವಿದ್ಯಾರ್ಥಿಗಳು ಡಿಡಿಪಿಐ ಕಚೇರಿ ಎದುರೇ ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು. ಮಧ್ಯಾಹ್ನದ ಊಟದ ಬಳಿಕವೂ ಪ್ರತಿಭಟನೆ ಮುಂದುವರಿದಿದ್ದು, ಅಂತಿಮವಾಗಿ ಸ್ಥಳಕ್ಕೆ ಆಗಮಿಸಿದ ಡಿಡಿಪಿಐ ಅವರು ಮನವಿ ಪತ್ರ ಸ್ವೀಕರಿಸಿ ಒಂದು ವಾರದೊಳಗೆ ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸುವುದಾಗಿ ಭರವಸೆ ನೀಡಿದರು.
ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ನಿರ್ವಾಹಕ ಸಾವು

ಪ್ರತಿಭಟನೆಯಲ್ಲಿ ಲಕ್ಷ್ಮೀಬಾಯಿ, ದೇವಮ್ಮ, ರೇಣುಕಾ, ಶಾಂತಮ್ಮ, ಶೋಭಾ, ಮಲ್ಲಮ್ಮ, ಯಲ್ಲಮ್ಮ, ಭೀಮಣ್ಣ, ರಾಯಪ್ಪ, ವೆಂಕಟೇಶ, ದೇವಿಂದ್ರ, ಸುಭಾಷ್ ಪೂಜಾರಿ, ಜಮಾಲಸಾಬ್, ಶರಣಗೌಡ, ಸೋಮಣಗೌಡ ಸೇರಿದಂತೆ ನೂರಾರು ಪೋಷಕರು, ವಿದ್ಯಾರ್ಥಿಗಳು ಹಾಗೂ ಎಐಡಿಎಸ್‌ಒ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಯಾದಗಿರಿ | ಸಮಾಜ ಪರಿವರ್ತನೆಗೆ ಸಂವಿಧಾನದ ಅರಿವು ಅಗತ್ಯ: ಭೀಮಣ್ಣ ಮೇಟಿ

ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಯುವಜನರು ಸಮಾಜ ಸುಧಾರಣೆಯಲ್ಲಿ...

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...