ಯಾದಗಿರಿ | ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ: ಮಾತೃಛಾಯ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Date:

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಮಾತೃಛಾಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಹಾಗೂ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಉದ್ಘಾಟಿಸಿದ ವರ್ಲ್ಡ್ ವಿಷನ್ ವ್ಯವಸ್ಥಾಪಕ ಅನಿಲ್ ತೇಜಪ್ಪ ಮಾತನಾಡಿ, ‘ಮಕ್ಕಳಲ್ಲಿ ಪರಿಸರ ಜ್ಞಾನ ಮತ್ತು ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು. ಪರಿಸರ ಸಂರಕ್ಷಣೆಯ ಜೊತೆಗೆ ಶುಚಿತ್ವ ಕಾಪಾಡಿಕೊಳ್ಳುವ ಅಭ್ಯಾಸವನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು’ ಎಂದು ಮಕ್ಕಳಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

‘ಪರಿಸರ ನಾಶದಿಂದ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ವಾಯು ಮಾಲಿನ್ಯ ಹೆಚ್ಚಾಗಿ ಶುದ್ಧ ಗಾಳಿಯ ಕೊರತೆ ಉಂಟಾಗುತ್ತಿದೆ. ಇದರಿಂದ ಮಾನವ ಜೀವನವೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ‘ಮನೆಗೊಂದು ಮಗು, ಮಗುವಿಗೊಂದು ಮರ’ ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಪರಿಸರ ಜಾಗೃತಿ ಮೂಡಿಸಿದರು.

ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮಕ್ಕಳಿಗೆ ಕೇವಲ ಶಿಕ್ಷಣವಷ್ಟೇ ಅಲ್ಲದೆ ವಿನಯ, ಶಿಸ್ತು ಹಾಗೂ ನೈತಿಕ ಮೌಲ್ಯಗಳನ್ನು ಸಹ ಕಲಿಸಬೇಕು. ವಿನಯವು ವ್ಯಕ್ತಿಯ ಗೌರವವನ್ನು ಹೆಚ್ಚಿಸುತ್ತದೆ. ಇಂದಿನ ಸಮಾಜದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣದ ಕೊರತೆ ಕಂಡುಬರುತ್ತಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ನಗರ ಪ್ರಾಥಮಿಕ ಆರೋಗ್ಯಾಧಿಕಾರಿ ಅಭಿಷೇಕ್ ರೆಡ್ಡಿ ಮಾತನಾಡಿ, ‘ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನಿರಂತರ ನಗರೀಕರಣ ಹಾಗೂ ಪರಿಸರ ನಾಶದಿಂದ ಮುಂದಿನ ದಿನಗಳಲ್ಲಿ ಮಾನವಕುಲವೇ ಅಪಾಯದ ಅಂಚಿಗೆ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಫ್‌ಎಸ್‌ಟಿಪಿ ಘಟಕದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ತಿಪ್ಪಣ್ಣ ಕ್ಯಾತನಾಳ, ಬಾಬುರಾವ್, ಮೋಹನ್ ಕುಮಾರ್ ಹೊಸಮನಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ವೇಳೆ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...