ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ : ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ

Date:

ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಯಾದಗಿರಿ ಜಿಲ್ಲೆಯ ನಾಲ್ವಡಗಿ ಪಟ್ಟಣದ ಶಹಾಪುರ ಗೇಟ್ ಬಳಿ ಶುಕ್ರವಾರ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ರಾಜ್ಯ ಸರ್ಕಾರ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಬಡ ಹಾಗೂ ಗ್ರಾಮೀಣ ಜನತೆಗೆ ವಿರುದ್ಧವಾದೆ. ರಾಜ್ಯಾದ್ಯಂತ ಪೋಷಕರು, ಗ್ರಾಮಸ್ಥರು ಹಾಗೂ ಸಾಹಿತಿಗಳು ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

‘ಒಂದೇ ಒಂದು ಮಗು ಇದ್ದರೂ ಶಾಲೆ ಮುಚ್ಚುವುದಿಲ್ಲ ಎಂಬ ಶಿಕ್ಷಣ ಸಚಿವರ ಹೇಳಿಕೆ ಕೇವಲ ಮಾತಿನ ಮಟ್ಟಕ್ಕೆ ಸೀಮಿತವಾಗಿದೆ. ಎಸ್‌ಡಿಎಂಸಿ ಅನುಮತಿ ಇಲ್ಲದೆ ಶಾಲೆ ವಿಲೀನಗೊಳ್ಳುವುದಿಲ್ಲ ಎಂಬ ಹೇಳಿಕೆಯೂ ಜನರನ್ನು ಮರುಳು ಮಾಡುವ ಪ್ರಯತ್ನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯೋಜನೆ ರೂಪಿಸುವ ಮೊದಲು ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ’ ಎಂದು ದೂರಿದರು.

‘ಎಡಿಬಿ ಬ್ಯಾಂಕ್ ಸಾಲ, ಕೆಕೆಆರ್‌ಡಿಬಿ, ಮೈನಿಂಗ್ ಹಾಗೂ ಸಿಎಸ್‌ಆರ್ ನಿಧಿಗಳ ಮೂಲಕ ಯೋಜನೆ ಜಾರಿಗೊಳಿಸುತ್ತಿರುವುದರಿಂದ ಸರ್ಕಾರಿ ಅನುದಾನದ ಬಗ್ಗೆ ಸ್ಪಷ್ಟತೆ ಇಲ್ಲ. ಇದು ಶಿಕ್ಷಣದ ಖಾಸಗೀಕರಣದತ್ತ ಸಾಗುವ ಅಪಾಯಕಾರಿ ಕ್ರಮವಾಗಿದೆ. ಸರ್ಕಾರಕ್ಕೆ ಶಿಕ್ಷಣದ ಮೇಲಿನ ನಿಜವಾದ ಕಾಳಜಿ ಇದ್ದರೆ 61 ಸಾವಿರ ಖಾಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು, ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಶಾಲೆಗಳನ್ನು ಮುಚ್ಚುವ ಯಾವುದೇ ಪ್ರಯತ್ನವನ್ನು ಜನತೆ ಒಪ್ಪುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮನರೇಗಾ ಕೂಲಿ ಕಾರ್ಮಿಕರಿಂದ ಹೊಸ ವರ್ಷದ ಸಂಭ್ರಮ

ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸಮಿತಿ ಸದಸ್ಯ ನಾಗರಾಜ್ ವಹಿಸಿದ್ದರು.

ಪ್ರತಿಭಟನೆಯಲ್ಲಿ ಮಲ್ಲಪ್ಪ, ಅಯ್ಯಪ್ಪ, ಮಾಳಿಂಗರಾಯ, ತಿಮ್ಮಪ್ಪ, ಮರೆಪ್ಪ ಸೇರಿದಂತೆ ನಾಲ್ವಡಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...