ಯಾದಗಿರಿ | ದಲಿತ ಕುಟುಂಬಗಳಿಗೆ ವಸತಿ, ನಿವೇಶನ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Date:

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ದಲಿತ ಕುಟುಂಬಗಳಿಗೆ ವಸತಿ ಹಾಗೂ ನಿವೇಶನ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಾಸಕರ ಜನಸಂಪರ್ಕ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿ ಪ್ರತಿಭಟನಾಕಾರರು ಮಾತನಾಡಿ, “ಯಕ್ಷಿಂತಿ, ಅನವಾರ, ಹಯ್ಯಾಳ ಕೆ., ಬೊಮ್ಮನಹಳ್ಳಿ, ಮಾಲಹಳ್ಳಿ, ಐಕೂರು, ಟಿ.ವಡಗೇರ, ತುಮಕೂರು ಸೇರಿದಂತೆ ಹಲವು ಗ್ರಾಮಗಳ ದಲಿತ ಕುಟುಂಬಗಳು ಕಳೆದ ಹಲವು ವರ್ಷಗಳಿಂದ ನಿವೇಶನ ಹಾಗೂ ವಸತಿ ಸೌಲಭ್ಯವಿಲ್ಲದೆ ಸಂಕಷ್ಟದಲ್ಲಿವೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಯಕ್ಷಿಂತಿ ಗ್ರಾಮವು ಕೃಷ್ಣಾ ನದಿ ತೀರದಲ್ಲಿರುವುದರಿಂದ ಪ್ರತಿ ವರ್ಷ ಪ್ರವಾಹಕ್ಕೆ ತುತ್ತಾಗುತ್ತಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಹಲವು ಭರವಸೆಗಳು ದೊರೆತಿದ್ದರೂ ಶಾಶ್ವತ ಪರಿಹಾರ ಸಿಗಲಿಲ್ಲ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಅಂಬೇಡ್ಕರ್ ವಸತಿ, ಬಸವ ವಸತಿ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡಬೇಕು. ಶಹಾಪೂರ ನಗರದಲ್ಲಿ ಜಾರಿಯಲ್ಲಿರುವ ನಿವೇಶನ-ವಸತಿ ಮಾದರಿಯನ್ನು ಗ್ರಾಮೀಣ ಪ್ರದೇಶಗಳಲ್ಲೂ ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು.

ಯಕ್ಷಿಂತಿ ಗ್ರಾಮಕ್ಕೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವುದು, ದಲಿತ ಕುಟುಂಬಗಳಿಗೆ ಅಂಬೇಡ್ಕರ್ ಭವನ ಮಂಜೂರು ಮಾಡುವುದು, ರೈತರ ಜಮೀನುಗಳಿಗೆ ಸಂಪರ್ಕ ರಸ್ತೆ ಅಭಿವೃದ್ಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

“ಗಂಗಾ ಕಲ್ಯಾಣ ಯೋಜನೆಯಡಿ ಬಡ ರೈತರಿಗೆ ಬೋರ್‌ವೆಲ್ ಸೌಲಭ್ಯ ನೀಡಬೇಕು. ಕೃಷ್ಣಾ ನದಿ ಹಾಗೂ ಹಳ್ಳಗಳಿಂದ ಪೈಪ್‌ಲೈನ್ ಮೂಲಕ ನೀರು ಪೂರೈಸಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಸೌಲಭ್ಯಗಳನ್ನು ದಲಿತ ಕುಟುಂಬಗಳಿಗೆ ತಲುಪಿಸಬೇಕು” ಎಂದು ಆಗ್ರಹಿಸಿದರು.

“ಹತ್ತಿಗುಡೂರ ಸರ್ವೇ ನಂ.62/1/2/3/4ರ 25 ಎಕರೆ ಭೂಮಿಯನ್ನು ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಒಪ್ಪಿಗೆ ನೀಡಿದ್ದರೂ, ನಾಲ್ಕು ವರ್ಷಗಳಿಂದ ಭೂ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ” ಎಂದು ಆರೋಪಿಸಿದರು.

“ಬೇಡಿಕೆಗಳಿಗೆ ಶೀಘ್ರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿಯಲ್ಲಿ ನೂತನ ಮೃಗಾಲಯ ಲೋಕಾರ್ಪಣೆ

ಈ ಸಂದರ್ಭದಲ್ಲಿ ಹತ್ತಿಗುಡೂರ ಶರಣರಡ್ಡಿ, ನಿಂಗಣ್ಣ ಕರಡಿ, ಸಿದ್ದಣ್ಣ ಹೊಸಮನಿ, ಶರಣಪ್ಪ ಚಲುವಾದಿ, ದೇವಪ್ಪ ಅನಸೂರ, ಮರೆಮ್ಮ ಹೊಸಮನಿ, ಮಾಳಮ್ಮ ಹತ್ತಿಗುಡೂರ, ಶಿವಮ್ಮ ಹತ್ತಿಗುಡೂರ, ಮಹಾಲಕ್ಷ್ಮಿ, ಮಲ್ಲಮ್ಮ ಕೊಂಗೊಂಡಿ, ಲಕ್ಷ್ಮಿ ಅನವಾರ ಸೇರಿದಂತೆ ಹಲವು ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...