ಯಾದಗಿರಿ | ಗುಣಮಟ್ಟ ಶಿಕ್ಷಣದಿಂದ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ: ವಾಣಿಶ್ರೀ ದರ್ಬಾರಿ

Date:

ಗುಣಮಟ್ಟದ ಶಿಕ್ಷಣದಿಂದಲೇ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ರಸ್ತಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ವಾಣಿಶ್ರೀ ದರ್ಬಾರಿ ಹೇಳಿದರು.

- Advertisement -

ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬಾಟಲಿಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಮಾತನಾಡಿ, ‘ಶಿಕ್ಷಣವಿಲ್ಲದೆ ಜೀವನದಲ್ಲಿ ಸಾಧನೆ ಸಾಧ್ಯವಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು. ಸಂಸ್ಥೆಯು ಈಗಾಗಲೇ ಶಾಲೆಗೆ ಆರ್‌ಒ ಯೂನಿಟ್ ಹಾಗೂ ಬಜಾಜ್ ವಾಟರ್ ಕೂಲರ್‌ಗಳನ್ನು ದೇಣಿಗೆಯಾಗಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶುದ್ಧ ಹಾಗೂ ತಂಪಾದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

‘ಶುದ್ಧ ಕುಡಿಯುವ ನೀರಿನ ಬಳಕೆಯಿಂದ ಅನೇಕ ಕಾಯಿಲೆಗಳನ್ನು ತಡೆಗಟ್ಟಬಹುದು. ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಸ್ತಾಪುರ ಗ್ರಾಮದಲ್ಲಿ ಎರಡು ಪರಿಹಾರ ಬೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಅಲ್ಲದೆ, ಶಹಾಪುರ ಭಾಗದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 2,500 ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಲಾಗುತ್ತಿದೆ’ ಎಂದು ಹೇಳಿದರು.

2022708

‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಪ್ಪಗೌಡ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ವಾಚನಾಲಯ ಸೌಲಭ್ಯವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜೊತೆಗೆ, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಾಮಾಜಿಕ ಕಾರ್ಯಗಳನ್ನು’ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು 98 ಶೇಕಡಾ ಫಲಿತಾಂಶ ದಾಖಲಿಸಿದ್ದಕ್ಕಾಗಿ ಮುಖ್ಯ ಗುರುಗಳಾದ ವಾಣಿಶ್ರೀ ದರ್ಬಾರಿ ಅವರನ್ನು ಸನ್ಮಾನಿಸಲಾಯಿತು. ಹಾಗೆಯೇ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಾದ ಅಶ್ವಿನಿ ಎಂಕಪ್ಪ (90.72%), ಯಾಸ್ಮಿನ್ ಮುನೀರ್ ಸಾಬ್ (84.16%) ಹಾಗೂ ಚಂದ್ರಕಲಾ ದೊಡ್ಡ ವೆಂಕಪ್ಪ (80.64%) ಅವರನ್ನು ಶಾಲು, ಹೂಮಾಲೆ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯ ಭೀಮರಾಯ ಜಾಗರಿ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ವೀರೇಶ್, ಮಲ್ಲು ಆರಬೋಳ, ಸಂಗನಗೌಡ ಕಾನ್ಸ್ಟೇಬಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಕೊಲೆ ಯತ್ನ ಆರೋಪ; ಪ್ರಕರಣ ದಾಖಲು

ಕಾರ್ಯಕ್ರಮವನ್ನು ಮಾರ್ಟಿನ್ ಶಾಂತಕುಮಾರ್ ನಿರೂಪಿಸಿದರು. ಮೋಹನ್ ಕುಮಾರ್ ಸ್ವಾಗತಿಸಿದರು. ಮೈಕಲ್ ಸಂಪತ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಡಿವೈಎಸ್ಪಿ ರಘು ಎನ್ ನೇತೃತ್ವದಲ್ಲಿ ವಾಹನ ತಪಾಸಣೆ

ಇತ್ತೀಚೆಗೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳ ಬೆನ್ನೆಲೆಯಲ್ಲಿ, ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು...

ಬಾಗೇಪಲ್ಲಿ | ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ವಾಲ್ಮೀಕಿ ಜಯಂತಿ ಸಭೆಗೆ ಕಪ್ಪು ಪಟ್ಟಿ ಧರಿಸಿ ಬಹಿಷ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಆದ್ದರಿಂದ ವಾಲ್ಮೀಕಿ...

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...